ಕೆ.ಎಂ.ದೊಡ್ಡಿ: ಮದ್ದೂರು ಕ್ಷೇತ್ರ ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ರಸ್ತೆ ಮತ್ತು ಚರಂಡಿ ಕಾಮಗಾರಿಗಳಿಗೆ ಆದ್ಯತೆ ನೀಡಿದ್ದು, ಸರ್ಕಾರದಿಂದ ಮತ್ತಷ್ಟು ಅನುದಾನ ತಂದು ಅಭಿವೃದ್ಧಿಪಡಿಸಲಾಗುತ್ತಿದೆ ಎಂದು ಶಾಸಕ ಕದಲೂರು ಉದಯ್ ತಿಳಿಸಿದರು.
ಪಂಚಾಯತ್ ರಾಜ್ ಇಂಜಿನಿಯರಿಂಗ್ ಇಲಾಖೆ ವತಿಯಿಂದ ಕೆ.ಶೆಟ್ಟಹಳ್ಳಿ 25 ಲಕ್ಷ ರೂ., ಹೊನ್ನಾಯಕನಹಳ್ಳಿ ಗ್ರಾಮದಲ್ಲಿ 25 ಲಕ್ಷ ರೂ. ವೆಚ್ಚದಲ್ಲಿ ಗ್ರಾಮ ಪರಿಮಿತಿಯಲ್ಲಿ ಸಿ.ಸಿ ರಸ್ತೆ ಮತ್ತು ಚರಂಡಿ ಕಾಮಗಾರಿಗೆ ಭೂಮಿಪೂಜೆ ನೆರವೇರಿಸಿ ಮಾತನಾಡಿದರು.
ಗ್ರಾಮಸ್ಥರು ಗ್ರಾಮಗಳಲ್ಲಿ ಹದಗೆಟ್ಟಿರುವ ರಸ್ತೆ ಮತ್ತು ಚರಂಡಿಗಳ ನಿರ್ಮಾಣ ಸಂಬಂಧಿಸಿದಂತೆ ಮನವಿ ಸಲ್ಲಿಸಿದ್ದು, ಮನವಿ ಪೂರಕವಾಗಿ ಸರ್ಕಾರದಿಂದ ಹೆಚ್ಚಿನ ಅನುದಾನಗಳನ್ನು ತಂದು ಗ್ರಾಮಗಳಲ್ಲಿ ಹಂತ ಹಂತವಾಗಿ ರಸ್ತೆ ಮತ್ತು ಚರಂಡಿ ನಿರ್ಮಾಣ ಕಾಮಗಾರಿಗಳಿಗೆ ಚಾಲನೆ ನೀಡಿದ್ದೇನೆ ಎಂದರು.
ಗ್ರಾಮಗಳ ಅಭಿವೃದ್ಧಿಯಲ್ಲಿ ಮೂಲ ಸೌಕರ್ಯ ಸಮರ್ಪಕವಾಗಿ ಉಪಯೋಗವಾದಾಗ ಮಾತ್ರ ಅಭಿವೃದ್ಧಿಯ ಹಾದಿಯಲ್ಲಿ ಗ್ರಾಮಗಳು ಸಾಗುತ್ತವೆ. ಈ ನಿಟ್ಟಿನಲ್ಲಿ ಮೊದಲ ಹಂತವಾಗಿ ಹದಗೆಟ್ಟಿರುವ ರಸ್ತೆಗಳು ಚರಂಡಿ ನಿರ್ಮಾಣ ಕಾಮಗಾರಿಗೆ ಚಾಲನೆ ನೀಡಲಾಗಿದೆ ಎಂದು ತಿಳಿಸಿದರು.
ಕಾಮಗಾರಿಯೂ ಉತ್ತಮ ಗುಣಮಟ್ಟದ ನಿರ್ವಹಿಸಿಲು ಹಾಗೂ ಸೂಕ್ತ ಸಮಯದಲ್ಲಿ ಕಾಮಗಾರಿ ಪೂರ್ಣಗೊಳಿಸಲು ಅಧಿಕಾರಿಗಳು ಹಾಗೂ ಗುತ್ತಿಗೆದಾರರಿಗೆ ಸೂಚಿಸಲಾಗಿದೆ ಎಂದು ಮಾಹಿತಿ ನೀಡಿದರು.
ಮನ್‌ಮುಲ್ ನಿರ್ದೇಶಕ ಹರೀಶ್ ಬಾಬು, ಡಿಸಿಸಿ ಬ್ಯಾಂಕ್ ನಿರ್ದೇಶಕ ಸಂದರ್ಶ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿಯ ತಾಲೂಕು ಅಧ್ಯಕ್ಷ ಬಿ.ಬಸವರಾಜು, ಕೆ.ಶೆಟ್ಟಹಳ್ಳಿ ಗ್ರಾ.ಪಂ. ಅಧ್ಯಕ್ಷೆ ಸುಧಾ, ಮುಖಂಡರಾದ ಚಂದೂಪುರ ಹರೀಶ್, ಪೂಜಾರಿ ಮಹೇಶ್, ಕೆ.ಶೆಟ್ಟಹಳ್ಳಿ ರಘು, ಹೊನ್ನಾಯಕನಹಳ್ಳಿ ಮಹೇಂದ್ರ, ವಿಜಯಕುಮಾರ್, ಪುನೀತ್, ಹೊನ್ನಲಗೆರೆ ನಂದೀಶ್, ಮಲ್ಲೇಶ್ ಇತರರಿದ್ದರು.