ಬೇಲೂರು ತಾಲೂಕಿನ ರಾಯಪುರ ಕೊಪ್ಪಲು ಗ್ರಾಮದಲ್ಲಿ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಶಾಸಕ ಎಚ್.ಕೆ.ಸುರೇಶ್ ಭೂಮಿಪೂಜೆ ನೆರವೇರಿಸಿದರು. ಧನಂಜಯ, ಅಣ್ಣೇಗೌಡ, ನಾಗರಾಜ್, ಸಂತೋಷ್ ಇತರರು ಇದ್ದರು.  
ಜಿಲ್ಲೆ

ಗ್ರಾಮೀಣ ರಸ್ತೆಗಳ ಅಭಿವೃದ್ಧಿಗೆ ಆದ್ಯತೆ

ಮಾದೇಶ್ ತಿ.ನರಸೀಪುರ

ಬೇಲೂರು: ಬೇಲೂರು ಕ್ಷೇತ್ರದಲ್ಲಿರುವ ಸಾರ್ವಜನಿಕರ ಅನುಕೂಲಕ್ಕಾಗಿ ಗ್ರಾಮೀಣ ಪ್ರದೇಶಗಳ ರಸ್ತೆಗಳಿಗೆ ಮೊದಲು ಕಾಯಕಲ್ಪ ನೀಡುವುದಕ್ಕೆ ಆದ್ಯತೆ ನೀಡಲಾಗುವುದು ಎಂದು ಶಾಸಕ ಎಚ್.ಕೆ.ಸುರೇಶ್ ಹೇಳಿದರು.

ಯಗಚಿ ಯೋಜನೆ ಉಪವಿಭಾಗದಿಂದ ತಾಲೂಕಿನ ಬಂಟೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ರಾಯಪುರ ಕೊಪ್ಪಲು ಸೇರಿದಂತೆ ಸುತ್ತಮುತ್ತಲಿನ ಗ್ರಾಮಗಳಿಗೆ ಸಂಪರ್ಕ ಕಲ್ಪಿಸುವ 50 ಲಕ್ಷ ರೂ. ವೆಚ್ಚದ ಕಾಂಕ್ರೀಟ್ ರಸ್ತೆ ಕಾಮಗಾರಿಗೆ ಭಾನುವಾರ ಭೂಮಿ ಪೂಜೆ ನೆರವೇರಿಸಿ ಮಾತನಾಡಿ, ಪ್ರಥಮವಾಗಿ ಕ್ಷೇತ್ರದಲ್ಲಿರುವ ಗ್ರಾಮೀಣ ಪ್ರದೇಶದ ಜನರಿಗೆ ಉತ್ತಮ ಮೂಲಸೌಕರ್ಯ ಒದಗಿಸುವುದು ಹಾಗೂ ಒಂದು ಗ್ರಾಮದಿಂದ ಮತ್ತೊಂದು ಗ್ರಾಮಕ್ಕೆ ಸಂಪರ್ಕ ಕಲ್ಪಿಸುವ ರಸ್ತೆ ಅಭಿವೃದ್ಧಿ ಪಡಿಸಿದರೆ ಸಾರ್ವಜನಿಕರು ಮತ್ತು ರೈತರ ಸಂಚಾರಕ್ಕೆ ಸುಲಭವಾಗುತ್ತದೆ ಎಂದು ತಿಳಿಸಿದರು.

ಜತೆಗೆ ರೈತರು ತಾವು ಬೆಳೆದ ಬೆಳೆಗಳನ್ನು ಮಾರುಕಟ್ಟೆಗೆ ತೆಗೆದುಕೊಂಡು ಹೋಗಲು ಸಹಕಾರಿಯಾಗುತ್ತದೆ. ಇದರೊಂದಿಗೆ ಮುಂದಿನ ದಿನಗಳಲ್ಲಿ ತಾಲೂಕಿನ ಪ್ರತಿಯೊಂದು ಗ್ರಾಮಕ್ಕೂ ಶಾಶ್ವತ ಗುಣಮಟ್ಟದ ರಸ್ತೆ, ಶುದ್ಧ ಕುಡಿಯುವ ನೀರು ಮತ್ತು ವಿದ್ಯುತ್ ಸೌಲಭ್ಯ ಒದಗಿಸುವುದಕ್ಕೆ ಕ್ರಮ ಕೈಗೊಳ್ಳಲಾಗುವುದು. ಅಲ್ಲದೆ ಗ್ರಾಮಗಳ ಅಭಿವೃದ್ಧಿ ಕೆಲಸಗಳನ್ನು ಮಡುವ ಸಂದರ್ಭ ಸಾರ್ವಜನಿಕರ ಸಹಕಾರ ಅಗತ್ಯ. ಜನರೇ ಮುಂದೆ ನಿಂತು ತಮ್ಮ ಗ್ರಾಮಗಳ ಅಭಿವೃದ್ಧಿಯಲ್ಲಿ ಪಾಲುದಾರರಾಗಬೇಕು. ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಹೆಚ್ಚು ಹಣ ಮೀಸಲಿಟ್ಟಿರುವುದರಿಂದ ಅಭಿವೃದ್ಧಿ ಕಾರ್ಯಗಳು ಕುಂಠಿತವಾಗುತ್ತಿದೆ. ಆದರೂ ಮುಂದಿನ ದಿನಗಳಲ್ಲಿ ಪ್ರತಿ ಗ್ರಾಮಗಳಿಗೂ ಮೂಲ ಸೌಕರ್ಯಗಳನ್ನು ಒದಗಿಸಲು ಬದ್ಧನಾಗಿದ್ದೇನೆ ಎಂದು ಹೇಳಿದರು.

ಬಂಟೇನಹಳ್ಳಿ ಗ್ರಾಪಂ ಅಧ್ಯಕ್ಷ ಧನಂಜಯ, ಮುಖಂಡರಾದ ಅಣ್ಣೇಗೌಡ, ನಾಗರಾಜ್, ಸಂತೋಷ್ ಇತರರು ಇದ್ದರು.