ಆನೇಕಲ್​ ತಾಲೂಕಿನ ಬೊಮ್ಮಸಂದ್ರ ಸರ್ಕಾರಿ ಪ್ರಾಥಮಿಕ ಶಾಲೆಯಲ್ಲಿ ಹಮ್ಮಿಕೊಂಡಿದ್ದ ನಮ್ಮ ಶಾಲೆ&ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಗೌರಮ್ಮ ತಿಮ್ಮಾರೆಡ್ಡಿ ಫೌಂಡೇಷನ್​ ಬಿ.ಟಿ.ನಾಗರಾಜರೆಡ್ಡಿ ಮತ್ತು ೇತ್ರ ಶಿಣಾಧಿಕಾರಿ ಎನ್​.ವೆಂಕಟೇಶ್​ ಉದ್ಘಾಟಿಸಿದರು. ಎಎಸ್​ಬಿ ಕಾಲೇಜಿನ ಉಪನ್ಯಾಸಕಿ ಕವಿತಾ, ೇತ್ರ ಸಮನ್ವಯಾಧಿಕಾರಿ ಭಾಸ್ಕರ್​, ಯೋಗ ಶಿಕ ವೆಂಕಟಸ್ವಾಮಿರೆಡ್ಡಿ ಇದ್ದರು. 
ಜಿಲ್ಲೆ

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಆದ್ಯತೆ

ಬೆಂಗಳೂರು ಗ್ರಾಮಾಂತರ ಡೆಸ್ಕ್

ಆನೇಕಲ್​ : ಬೊಮ್ಮಸಂದ್ರ ಸರ್ಕಾರಿ ಮಾದರಿ ಪ್ರಾಥಮಿಕ ಶಾಲೆಯಲ್ಲಿ ಮಂಗಳವಾರ ಹಮ್ಮಿಕೊಂಡಿದ್ದ ನಮ್ಮ ಶಾಲೆ&ನಮ್ಮ ಜವಾಬ್ದಾರಿ ಕಾರ್ಯಕ್ರಮವನ್ನು ಗೌರಮ್ಮ ತಿಮ್ಮಾರೆಡ್ಡಿ ಫೌಂಡೇಷನ್​ ಬಿ.ಟಿ.ನಾಗರಾಜರೆಡ್ಡಿ ಮತ್ತು ಕ್ಷೇತ್ರ ಶಿಣಾಧಿಕಾರಿ ಎನ್​.ವೆಂಕಟೇಶ್​ ಉದ್ಘಾಟಿಸಿದರು.

ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಕ್ಷಣಕ್ಕೆ ಒತ್ತು ನೀಡಲಾಗಿದೆ. ಸರ್ಕಾರಿ ಶಾಲೆಗಳ ಸರ್ವತೋಮುಖ ಅಭಿವೃದ್ಧಿಗೆ ಪ್ರತಿಯೊಬ್ಬರೂ ಶ್ರಮಿಸಬೇಕು ಎಂದು ಕ್ಷೇತ್ರ ಶಿಕ್ಷಣಾಧಿಕಾರಿ ಎನ್​.ವೆಂಕಟೇಶ್​ ಹೇಳಿದರು.

ಶಾಲೆಗಳು ದೇವಾಲಯವಿದ್ದಂತೆ. ತಾಲೂಕಿನಲ್ಲಿ ಕೈಗಾರಿಕೆಗಳ ಸಿಎಸ್​ಆರ್​ ಯೋಜನೆಯಡಿ ಶಾಲೆಗಳಲ್ಲಿ ಸೌಲಭ್ಯಗಳನ್ನು ಮೇಲ್ದರ್ಜೆಗೇರಿಸಲಾಗಿದೆ. ಬೊಮ್ಮಸಂದ್ರ, ಹುಸ್ಕೂರು, ಕಲ್ಲುಬಾಳು, ಹಾರಗದ್ದೆ, ಕೋನಸಂದ್ರ ಗ್ರಾಮಗಳಲ್ಲಿ ಪ್ರತಿ ಶಾಲೆಗೆ 5ಕೋಟಿಗೂ ಹೆಚ್ಚು ವೆಚ್ಚದಲ್ಲಿ ಸೌಲಭ್ಯ ಕಲ್ಪಿಸಲಾಗಿದೆ. ಈ ಶಾಲೆಗಳು ಅಂತಾರಾಷ್ಟ್ರೀಯ ಮಟ್ಟದ ಶಾಲೆಗಳಂತೆ ಅಭಿವೃದ್ಧಿ ಪಡಿಸಲಾಗಿದೆ ಎಂದರು.

ಗೌರಮ್ಮ ತಿಮ್ಮಾರೆಡ್ಡಿ ಫೌಂಡೇಷನ್​ನ ಬಿ.ಟಿ.ನಾಗರಾಜರೆಡ್ಡಿ ಮಾತನಾಡಿ, ಸರ್ಕಾರಿ ಶಾಲೆಗಳಲ್ಲಿ ಗುಣಮಟ್ಟದ ಶಿಣ ನೀಡುವ ವ್ಯವಸ್ಥೆಯಿದೆ. ಉನ್ನತ ಶಿಣ ಪಡೆದ ಶಿಕರು ಕೆಲಸ ಮಾಡುತ್ತಿದ್ದಾರೆ. ಬೊಮ್ಮಸಂದ್ರ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 700ಕ್ಕೂ ಹೆಚ್ಚು ಮಕ್ಕಳು ವ್ಯಾಸಂಗ ಮಾಡುತ್ತಿದ್ದಾರೆ. ಪಾಲಕರು ಸರ್ಕಾರಿ ಶಾಲೆಯ ಬಗ್ಗೆ ಅಭಿಮಾನ ಬೆಳೆಸಿಕೊಂಡು ತಮ್ಮ ಮಕ್ಕಳನ್ನು ಸರ್ಕಾರಿ ಶಾಲೆಗೆ ಸೇರಿಸಬೇಕು. ಶಾಲೆಯೊಂದಿಗೆ ಒಡನಾಟ ಇಟ್ಟುಕೊಂಡು ಶಾಲೆಯ ಅಭಿವೃದ್ಧಿಗೆ ಪ್ರತಿಯೊಬ್ಬರು ಕೊಡುಗೆ ನೀಡಬೇಕು ಎಂದರು. ಪ್ರಾಥಮಿಕ ಶಾಲಾ ಶಿಕರ ಸಂದ ಲೋಕೇಶ್​, ಎಸ್​ಡಿಎಂಸಿ ಅಧ್ಯ ಈರಣ್ಣ, ಚಂದಾಪುರ ಪಿಎಚ್​ಸಿಯ ಡಾ.ಯಶಸ್ವಿನಿ, ಬೊಮ್ಮಸಂದ್ರ ಸರ್ಕಾರಿ ಶಾಲೆ ಶಿಕ್ಷಕ ಮಂಜುನಾಥ್​ ಇದ್ದರು.

ಬೊಮ್ಮಸಂದ್ರ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಗೆ ದಾಖಲಾಗುವ ಎಲ್ಲ ವಿದ್ಯಾರ್ಥಿಗಳಿಗೂ ಗೌರಮ್ಮ ತಿಮ್ಮಾರೆಡ್ಡಿ ಫೌಂಡೇಷನ್​ ಮೂಲಕ ಎರಡು ಜತೆ ಸಮವಸ, ಶೂ, ಶೈಣಿಕ ಪರಿಕರಗಳನ್ನು ಉಚಿತವಾಗಿ ನೀಡಲಾಗುತ್ತಿದೆ. ವಿದ್ಯಾರ್ಥಿಗಳನ್ನು ಶಾಲೆಗೆ ದಾಖಲು ಮಾಡಿದರೆ ಸಂಪೂರ್ಣ ಜವಾಬ್ದಾರಿ ಫೌಂಡೇಷನ್​ ಮತ್ತು ಶಿಣ ಇಲಾಖೆಯ ವಹಿಸಲಿದೆ. | ಬಿ.ಟಿ.ನಾಗರಾಜರೆಡ್ಡಿ ಗೌರಮ್ಮ ತಿಮ್ಮಾರೆಡ್ಡಿ ಫೌಂಡೇಷನ್​