ಆನೇಕಲ್ : ಬ್ಯಾಗಡದೇನಹಳ್ಳಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ದೊಡ್ಡಹಾಗಡೆಯಲ್ಲಿ ಮೊದಲ ಸುತ್ತಿನ ಗ್ರಾಮ ಸಭೆ ನಡೆಯಿತು. ಗ್ರಾಪಂ ವ್ಯಾಪ್ತಿಯ ಹಲವು ಗ್ರಾಮಸ್ಥರು ರಸ್ತೆ, ಕುಡಿಯುವ ನೀರಿನ ಟಕ, ಬೀದಿ ದೀಪ ಸೇರಿ ವಿವಿಧ ಸಮಸ್ಯೆಗಳ ಬಗ್ಗೆ ಸಾರ್ವಜನಿಕರು ಅಧಿಕಾರಿಗಳ ಗಮನಕ್ಕೆ ತಂದರು.
ಗ್ರಾಮ ಪಂಚಾಯಿತಿ ಅಧ್ಯಕ್ಷ ಎಂ.ಚಂದ್ರಶೇಖರ್ ಮಾತನಾಡಿ, ಸಾರ್ವಜನಿಕರು ತಿಳಿಸಿರುವ ಸಮಸ್ಯೆಗಳ ಪರಿಹಾರಕ್ಕೆ ಆದ್ಯತೆ ನೀಡಲಾಗುವುದು. ಪಂಚಾಯಿತಿ ಅಭಿವೃದ್ಧಿಗೆ ಸಾರ್ವಜನಿಕರ ಸಹಕಾರ ಅಗತ್ಯ. ಸ್ವಚ್ಛತೆ ಕಾಪಾಡಲು ಸಾರ್ವಜನಿಕರು ಸಹಕರಿಸಬೇಕು. ನಿಗದಿತ ಅವಧಿಯಲ್ಲಿ ಆಸ್ತಿಗೆ ಸಂಬಂಧಿಸಿದ ತೆರಿಗೆ ಪಾವತಿಸುವ ಮೂಲಕ ಪಂಚಾಯಿತಿ ಆದಾಯ ಅಭಿವೃದ್ಧಿಗೆ ಕೊಡುಗೆ ನೀಡಬೇಕು. ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಈ ಖಾತೆ ಆಂದೋಲನ ಆಯೋಜಿಸಲಾಗುವುದು. ಈ ಸೌಲಭ್ಯವನ್ನು ಸಾರ್ವಜನಿಕರು ಸದುಪಯೋಗಪಡಿಸಿಕೊಳ್ಳಬೇಕು. ಸಾರ್ವಜನಿಕರು ತಮ್ಮ ಆಸ್ತಿಗಳ ತೆರಿಗೆ ನಿಗದಿತ ಅವಧಿಯಲ್ಲಿ ಪಾವತಿಸುವುದರಿಂದ ಗ್ರಾಪಂಗಳ ಸಮಗ್ರ ಅಭಿವೃದ್ಧಿಗೆ ಪೂರಕವಾಗುತ್ತದೆ ಎಂದರು.