ಜಿಲ್ಲೆ

ಅಪರಾಧಿಗೆ ಕಾರಾಗೃಹ ಶಿಕ್ಷೆ, ದಂಡ

ಬೆಳಗಾವಿ: ಜಿಲ್ಲೆಯ ಹಾರೂಗೇರಿ ಪೊಲೀಸ್​ ಠಾಣೆ ವ್ಯಾಪ್ತಿಯಲ್ಲಿ ಅಪ್ರಾಪ್ತೆ ಮೇಲೆ ಅತ್ಯಾಚಾರ ಎಸಗಿದ ಅಪರಾಧಿಗೆ 20 ವರ್ಷ ಕಠಿಣ ಕಾರಾಗಹ ಶಿೆ ಹಾಗೂ 20 ಸಾವಿರ ರೂ. ದಂಡ ವಿಧಿಸಿ ಜಿಲ್ಲಾ ಪೋಕ್ಸೋ ನ್ಯಾಯಾಲಯ ಮಂಗಳವಾರ ತೀರ್ಪು ಪ್ರಕಟಿಸಿದೆ.

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲೂಕಿನ ಸಸಾಲಟ್ಟಿ ಗ್ರಾಮದ ಯಲ್ಲಾಲಿಂಗ ಉರ್ ಯಲ್ಲಪ್ಪ ರಾಮಪ್ಪ ಕ್ವಾಣಿ (29) ಶಿೆಗೆ ಒಳಗಾದ ಅಪರಾಧಿ.

ಟನೆ ವಿವರ: ಅಪರಾಧಿ 2017ರಲ್ಲಿ ಅಪ್ರಾಪ್ತೆಯನ್ನು ಮದುವೆ ಆಗುವುದಾಗಿ ನಂಬಿಸಿ, ಒತ್ತಾಯಪೂರ್ವಕವಾಗಿ ಅತ್ಯಾಚಾರ ಎಸಗಿದ್ದ. ಈ ಕುರಿತು ಪ್ರಕರಣ ದಾಖಲಿಸಿಕೊಂಡ ಹಾರೂಗೇರಿ ಪೊಲೀಸ್​ ಠಾಣೆ ತನಿಖಾಧಿಕಾರಿ ಸುರೇಶ ಶಿಂಗಿ ಹೆಚ್ಚುವರಿ ಜಿಲ್ಲಾ ಮತ್ತು ಸತ್ರ ನ್ಯಾಯಾಲಯಕ್ಕೆ ದೋಷಾರೋಪಣೆ ಪಟ್ಟಿ ಸಲ್ಲಿಸಿದ್ದರು. ಈ ಪ್ರಕರಣ ವಿಚಾರಣೆ ನಡೆಸಿದ ನ್ಯಾಯಾಧೀಶೆ ಸಿ.ಎಂ.ಪುಷ್ಪಲತಾ ಅವರು ಆರೋಪ ಸಾಬೀತಾದ ಹಿನ್ನೆಲೆಯಲ್ಲಿ ಅಪರಾಧಿಗೆ ಶಿೆ, ದಂಡ ವಿಧಿಸಿ ತೀರ್ಪು ನೀಡಿದ್ದಾರೆ. ಸರ್ಕಾರದ ಪರವಾಗಿ ವಿಶೇಷ ಸರ್ಕಾರಿ ಅಭಿಯೋಜಕ ಎಲ್​.ವಿ.ಪಾಟೀಲ ವಾದ ಮಂಡಿಸಿದ್ದರು.