ಯಲ್ಲಾಪುರ: ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾದ ಘಟನೆ ತಾಲೂಕಿನ ಮಾಗೋಡ ಸಮೀಪದ ಕಾರಕುಂಕಿ ಘಟ್ಟದಲ್ಲಿ ನಡೆದಿದೆ.
ಮಾಗೋಡ ಜಲಪಾತ ವೀಕ್ಷಣೆಗೆ ಬರುತ್ತಿದ್ದ ಪ್ರವಾಸಿಗರು ಬಸ್‌ನಲ್ಲಿದ್ದರು. ಕಾರಕುಂಕಿ ಘಟ್ಟದ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ಬಸ್ ಪಲ್ಟಿಯಾಗಿದೆ. ಬಸ್‌ನಲ್ಲಿ ಬೆಂಗಳೂರು ಮೂಲದ 25ಕ್ಕೂ ಹೆಚ್ಚು ಪ್ರವಾಸಿಗರಿದ್ದು, ಕೆಲವರಿಗೆ ಸಣ್ಣಪುಟ್ಟ ಗಾಯಗಳಾಗಿವೆ.