ಜಿಲ್ಲೆ

ಕಳ್ಳರ ರಕ್ಷಿಸುವುದು ನಿಮ್ಮ ತತ್ವನಾ ? : ಆಂದೋಲಾ ಸ್ವಾಮೀಜಿ ವಿರುದ್ಧ ಸಚಿವ ಪ್ರಿಯಾಂಕ್ ಖರ್ಗೆ ವಾಗ್ದಾಳಿ

ಬಾಬುರಾವ ಯಡ್ರಾಮಿ


 ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ವಿರುದ್ಧ ಟೀಕಾ ಪ್ರಹಾರ

ವಿಜಯವಾಣಿ ಸುದ್ದಿಜಾಲ ಕಲಬುರಗಿ

ಬಿಜೆಪಿ ರಾಜ್ಯ ಪ್ರಧಾನ ಕಾರ್ಯದರ್ಶಿ ಎನ್.ರವಿಕುಮಾರ ಆವರು ಜೇವರ್ಗಿಯಲ್ಲಿ  ಪಕ್ಷದ ಟಿಕೆಟ್ ಮಾಡಿಕೊಂಡಿದ್ದಾರೆ ಎಂದು ಸ್ವತಃ ಅವರ ಪP್ಷÀದವರೇ ಹೇಳಿದ್ದಾರೆ. ಅದಾದ ಮೇಲೆ ಅವರು ಕಲಬುರಗಿಗೆ ಬಂದಿರಲಿಲ್ಲ. ನಿನ್ನೆ ಚಿತ್ತಾಪುರಕ್ಕೆ ಬಂದು ಪ್ರತಿಭಟನೆಯಲ್ಲಿ ಭಾಗಿಯಾಗಿz್ದÁರೆ. ಅವರ ಶಿಷ್ಯನಿಗೆ ಗಡಿಪಾರು ಶಿಕ್ಷೆ ವಿಧಿಸಿದಾಗ ರವಿಕುಮಾರ ಯಾಕೆ ಬಂದು ಪ್ರತಿಭಟನೆ ಮಾಡಲಿಲ್ಲ.?  ಇದು ಬಿಜೆಪಿ ಸರ್ಕಾರದ ಕಲಬುರಗಿ ಅಲ್ಲ, ಕಾಂಗ್ರೆಸ್ ಸರ್ಕಾರದ ಕಲಬುರಗಿ. ನಿಮ್ಮ ಶಿಷ್ಯ ಅಷ್ಟೇ ಅಲ್ಲ, ನೀವು ತಪ್ಪು ಮಾಡಿದರೆ, ನಿಮ್ಮ ಮೇಲೂ ಕಾನೂನು ಕ್ರಮ ಆಗುತ್ತದೆ  ಎಂದು ಸಚಿವ ಪ್ರಿಯಾಂಕ್ ಖರ್ಗೆ ಎಚ್ಚರಿಸಿದರು.
ಶ್ರೀರಾಮ ಸೇನೆ ಗೌರವಾಧ್ಯಕ್ಷರಾಗಿರುವ ಆಂದೋಲಾದ ಸಿದ್ದಲಿಂಗ ಸ್ವಾಮೀಜಿ ವಿರುದ್ದ ಸಚಿವ ಪ್ರಿಯಾಂಕ್ ಹರಿಹಾಯ್ದರು. ಕಟುವಾದ ಪದಗಳ ಬಳಸಿ ಟೀಕಿಸಿ, ನಿಮ್ಮದು ಎಂತಹ ತತ್ವ ?  ಎಂದು ಖಾರವಾಗಿ ಪ್ರಶ್ನಿಸಿದರು. ಅಕ್ಕಿ ಕಳ್ಳರಿಗೆ, ಅಂಗನವಾಡಿ ಮಕ್ಕಳ ಹಾಲಿನ ಪೌಡರ್ ಕಳ್ಳತನ ಮಾಡುವವರ ರP್ಷÀಣೆ ಮಾಡಿ ಅಂತ ನಿಮ್ಮ ತತ್ವ ಹೇಳುತ್ತಾ? ಎಂದು  ಪ್ರಿಯಾಂಕ್ ಖರ್ಗೆ ಪ್ರಶ್ನಿಸಿದರು.
ಬಿಜೆಪಿ ಸರ್ಕಾರ ಇz್ದÁಗ ಅಕ್ಕಿ ಹಾಗೂ  ಹಾಲಿನ ಪುಡಿ ಕಳ್ಳತನ ಮಾಡಿರುವ ಆರೋಪ ಹೊತ್ತಿರುವವರಿಗೆ ಟಿಕೇಟ್ ನೀಡಲಾಗಿತ್ತು. ನಮ್ಮ ಸರ್ಕಾರ ಬಂದ ಮೇಲೆ ಅಂತವರನ್ನ ಜೈಲಿಗೆ ಕಳಿಸಲಾಗಿದೆ ಎಂದು ಖರ್ಗೆ ವಾಗ್ದಾಳಿ ನಡೆಸಿದರು.