ಜಿಲ್ಲೆ

ಗ್ರಾಮ ಪಂಚಾಯಿತಿ ಮಟ್ಟದಲ್ಲೇ ಸಮಸ್ಯೆ ಪರಿಹಾರ

ಜಿ.ಹೆಚ್. ಧನ್ಯಕುಮಾರ್

ಲಿಂಗದಹಳ್ಳಿ: ಗ್ರಾಮಸ್ಥರ ಅಹವಾಲುಗಳನ್ನು ಆಲಿಸಿ ಪಂಚಾಯಿತಿ ಮಟ್ಟದಲ್ಲಿ ಪರಿಹಾರವಾಗುವಂತ ಸಮಸ್ಯೆಗಳನ್ನು ಸ್ಥಳದಲ್ಲಿಯೇ ಪರಿಹರಿಸಿ ವಿವಿಧ ಇಲಾಖೆಗಳ ಸಮಸ್ಯೆಗಳನ್ನು ಆಯಾ ಆಯಾ ಇಲಾಖೆಗಳ ಗಮನಕ್ಕೆ ತಂದು ಸೂಕ್ತ ಪರಿಹಾರ ಕಲ್ಪಿಸಲು ರಾಜ್ಯಸರ್ಕಾರ ಪಂಚಾಯಿತಿ ಕಟ್ಟೆ ಕಾರ್ಯಕ್ರಮ ಜಾರಿಗೊಳಿಸಿದೆ ಎಂದು ತಿಗಡ ಗ್ರಾಪಂ ಪಿಡಿಒ ಟಿ.ಶಿವಮೂರ್ತಿ ಹೇಳಿದರು.

ಪಂಚಾಯತ್ ರಾಜ್ ಗ್ರಾಮೀಣಾಭಿವೃದ್ಧಿ ಇಲಾಖೆ ಮತ್ತು ತಿಗಡ ಗ್ರಾಪಂಗಳ ಆಶ್ರಯದಲ್ಲಿ ತಣಿಗೆಬೈಲಿನ ಶ್ರೀಚೌಡೇಶ್ವರಿ ಪ್ರೌಢಶಾಲೆ ಆವರಣದಲ್ಲಿ ನಡೆದ ಪಂಚಾಯಿತಿ ಕಟ್ಟೆ ಗ್ರಾಮಸಭೆಯಲ್ಲಿ ಮಾತನಾಡಿದ ಅವರು, ಸರ್ಕಾರ ಗ್ರಾಮಸ್ಥರ ಸಮಸ್ಯೆಗಳನ್ನು ಮನೆ ಬಾಗಿಲಿನಲ್ಲಿಯೇ ಪರಿಹರಿಸುವ ಸಲುವಾಗಿ ಈ ಯೋಜನೆ ಜಾರಿಗೆ ತಂದಿದೆ. ಪ್ರತಿ ತಿಂಗಳ ಮೊದಲ ಮಂಗಳವಾರ ಗ್ರಾಪಂ ವ್ಯಾಪ್ತಿಯ ಒಂದೊಂದು ಗ್ರಾಮದಲ್ಲಿ ಈ ಗ್ರಾಮ ಸಭೆಯನ್ನು ಪ್ರತಿ ತಿಂಗಳು ನಡೆಸಲಾಗುವುದು ಎಂದು ಹೇಳಿದರು.

ತಿಗಡ ಗ್ರಾಪಂ ಅಧ್ಯಕ್ಷೆ ಶ್ರೀ ದೇವಿ, ಚೌಡೇಶ್ವರಿ ಪ್ರೌಢಶಾಲಾ ಮುಖ್ಯಶಿಕ್ಷಕ ಎಲ್.ಸಿ.ಕುಮಾರ್, ಕಾರ್ಯದರ್ಶಿ ಜಯಣ್ಣ, ಆರ್.ಗಗನ್, ಆರ್.ಸತೀಶ್ ಇದ್ದರು.