ಕಣಿವೆಬಸವನಹಳ್ಳಿ ಗ್ರಾಮದಲ್ಲಿ ಆಯೋಜಿಸಿದ್ದ ಗೌರಿ ಗಣಪತಿ ವಿಸರ್ಜನೆ ಕಾರ್ಯಕ್ರಮದಲ್ಲಿ ಗ್ರಾಮಸ್ಥರು ಪಾಲ್ಗೊಂಡಿದ್ದರು. 
ಜಿಲ್ಲೆ

ಕಣಿವೆಬಸವನಹಳ್ಳಿಯಲ್ಲಿ ಮೆರವಣಿಗೆ

ಅಭಿನಯ್ ಎಚ್.ಎಂ

ಶನಿವರಸಂತೆ: ಗಣೇಶ ಚತುರ್ಥಿ ಪ್ರಯುಕ್ತ ಗ್ರಾಮದ ಗೌರಿ ಗಣೇಶ ಸೇವಾ ಸಮಿತಿ ಮತ್ತು ಗ್ರಾಮಸ್ಥರ ಸಹಭಾಗಿತ್ವದಲ್ಲಿ ಸಮೀಪದ ಕಣಿವೆಬಸವನಹಳ್ಳಿ ಗ್ರಾಮದ ಸಮುದಾಯ ಭವನದಲ್ಲಿ ಪ್ರತಿಷ್ಠಾಪಿಸಲಾಗಿದ್ದ ಗೌರಿ ಗಣಪತಿ ಮೂರ್ತಿಯನ್ನು ಭಾನುವಾರ ರಾತ್ರಿ ವಿಸರ್ಜಿಸಲಾಯಿತು.

ಇದಕ್ಕೂ ಮುನ್ನ ಗೌರಿ-ಗಣಪತಿ ಮೂರ್ತಿಗೆ ಗ್ರಾಮಸ್ಥರು ವಿಶೇಷ ಪೂಜೆ ಸಲ್ಲಿಸಿದರು. ನಂತರ ಗೌರಿ ಗಣಪತಿ ಮೂರ್ತಿಯನ್ನು ಅಲಂಕೃತ ಮಂಟಪದಲ್ಲಿ ಕೂರಿಸಲಾಯಿತು. ಬಳಿಕ ವಾದ್ಯಗೋಷ್ಠಿಯೊಂದಿಗೆ ಮೆರವಣಿಗೆ ಆರಂಭವಾಯಿತು. ಗ್ರಾಮದ ಮುಖ್ಯ ರಸ್ತೆಯಿಂದ ಆರಂಭವಾದ ಮೆರವಣಿಗೆ ಮಾಲಂಬಿ ಗ್ರಾಮದ ಬಳಿ ಅಂತ್ಯವಾಯಿತು. ಸಂಜೆ ಗೌರಿ ಗಣಪತಿ ಮೂರ್ತಿಯನ್ನು ಗ್ರಾಮದ ಕೆರೆಯಲ್ಲಿ ವಿಸರ್ಜಿಸಲಾಯಿತು.