ಜಿಲ್ಲೆ

ಮಂಡ್ಯ ವಿವಿಗೆ ಪ್ರೊ.ಕೆ.ಶಿವಚಿತ್ತಪ್ಪ ನೂತನ ಕುಲಪತಿ: ಅಧಿಕಾರ ಸ್ವೀಕಾರ

ಮಂಡ್ಯ: ಮಂಡ್ಯ ವಿಶ್ವವಿದ್ಯಾನಿಲಯದ ನೂತನ ಕುಲಪತಿಯಾಗಿ ಪ್ರೊ.ಕೆ.ಶಿವಚಿತ್ತಪ್ಪ ಅಧಿಕಾರ ಸ್ವೀಕರಿಸಿದರು.

ತೂಬಿನಕೆರೆ ಸ್ನಾತಕೋತ್ತರ ಅಧ್ಯಯನ ಕೇಂದ್ರದಲ್ಲಿ ಹಿರಿಯ ಪ್ರಾಧ್ಯಾಪಕರಾಗಿದ್ದ ಕರ್ತವ್ಯ ನಿರ್ವಹಿಸುತ್ತಿದ್ದ ಶಿವಚಿತ್ತಪ್ಪ ಅವರು, ಇದೀಗ ಮಂಡ್ಯ ವಿವಿಯ ಕುಲಪತಿಗಳಾಗಿ ಅಧಿಕಾರ ಸ್ವೀಕಾರ ಮಾಡಿದ್ದಾರೆ. ಬಳಿಕ ಮಾತನಾಡಿದ ಅವರು, ನೂತನ ಕುಲಪತಿಗಳಾಗಿ ಅಧಿಕಾರ ಸ್ವೀಕರಿಸಿದೇನೆ. ರಾಜ್ಯಪಾಲರ ನೇಮಿಸಿ ಆದೇಶ ಮಾಡಿದ್ದಾರೆ. ಮಂಡ್ಯ ವಿಶ್ವವಿದ್ಯಾಲಯವನ್ನು ಮತಷ್ಟು ಅಭಿವೃದ್ಧಿ ಮಾಡಲು ಪ್ರಾಮಾಣಿಕತೆ ವಹಿಸುತ್ತೇನೆ ಎಂದು ಭರವಸೆ ನೀಡಿದರು.

25 ವರ್ಷದಿಂದ ಪ್ರಾಧ್ಯಾಪಕನಾಗಿ ಸೇವೆ ಸಲ್ಲಿಸಿರುವ ಅನುಭವ ಇದೆ. ಮಂಡ್ಯ ವಿವಿ ಅಭಿವೃದ್ಧಿಗೆ ಸಾಕಷ್ಟು ಕನಸು ಇದೆ. ಅವಕಾಶ ಸಿಕ್ಕಿದ್ದು, ಮಂಡ್ಯ ವಿವಿ ಅಭಿವೃದ್ಧಿಗೆ ಶ್ರಮಿಸುತ್ತೇನೆ. ಉಪನ್ಯಾಸಕರ ಸಮಸ್ಯೆಗಳನ್ನು ಸರಿಪಡಿಸುವ ಕೆಲಸ ಮಾಡುತ್ತೇನೆ. ಮೈಸೂರು ವಿವಿ ರೀತಿಯಲ್ಲಿ ಮಂಡ್ಯ ವಿವಿ ಅಭಿವೃದ್ಧಿ ಆಗುವಂತೆ ನೋಡಿಕೊಳ್ಳಲು ಎಲ್ಲರ ಸಹಕಾರ ಬೇಕು ಎಂದು ಮನವಿ ಮಾಡಿದರು.

ಅತಿಥಿ ಉಪನ್ಯಾಸಕರಾದ ಬಿ.ಎಸ್.ನಾಗರಾಜು, ಭಾರತಿ, ಚಂದನಾ, ಡಾ.ಮಲ್ಲೇಶ್, ಡಾ.ಕವಿತಾ ಇತರರಿದ್ದರು.