ಜಿಲ್ಲೆ

ಪ್ರೊಫೆಷನಲ್ ಎಥಿಕ್ಸ್ ಕಾರ್ಯಾಗಾರ

ಸೌಮ್ಯ ಆರ್

ಸುಳ್ಯ: ಕೆ.ವಿ.ಜಿ. ದಂತ ಮಹಾವಿದ್ಯಾಲಯ ಮತ್ತು ಆಸ್ಪತ್ರೆಯ ಓರಲ್ ಪೆಥಾಲಜಿ ಮತ್ತು ಮೈಕ್ರೋಬಯಾಲಜಿ ವಿಭಾಗದ ವತಿಯಿಂದ ಪ್ರೊಫೆಶನಲ್ ಎಥಿಕ್ಸ್ ಕಾರ್ಯಾಗಾರ ಶುಕ್ರವಾರ ಆಯೋಜಿಸಲಾಗಿತ್ತು.ಚ್ಟಎ.ಬಿ. ಶೆಟ್ಟಿ ಮೆಮೋರಿಯಲ್ ಇನ್‌ಸ್ಟಿಟ್ಯೂಟ್ ಆಫ್ ಡೆಂಟಲ್ ಸೈನ್ಸಸ್, ಮಂಗಳೂರು ವಿಭಾಗದ ಮುಖ್ಯಸ್ಥ ಡಾ.ಆಡ್ರಿ ಮಡೋನ್ನ ಡಿಕ್ರುಜ್ ಸಂಪನ್ಮೂಲ ವ್ಯಕ್ತಿಯಾಗಿ ಭಾಗವಹಿಸಿದರು.

ಕಾಲೇಜಿನ ಮುಖ್ಯ ಕಾರ್ಯನಿರ್ವಹಣಾಧಿಕಾರಿ ಪ್ರೊಫೆಸರ್ ಡಾ.ಉಜ್ವಲ್ ಯು.ಜೆ.ಶುಭಹಾರೈಸಿದರು. ಪ್ರಾಂಶುಪಾಲೆ ಡಾ. ಮೋಕ್ಷಾ ನಾಯಕ್ ಪ್ರಾಸ್ತಾವಿಕವಾಗಿ ಮಾತನಾಡಿ, ಕಾರ್ಯಕ್ರಮದ ಪ್ರಯೋಜನ ಪಡೆದುಕೊಳ್ಳುವಂತೆ ತಿಳಿಸಿದರು.

ಕಾರ್ಯಕ್ರಮದ ಅಂಗವಾಗಿ ವಿದ್ಯಾರ್ಥಿಗಳಿಗೆ ಆಯೋಜಿಸಲಾಗಿದ್ದ ವಿವಿಧ ಸ್ಪರ್ಧೆ ವಿಜೇತರಿಗೆ ಬಹುಮಾನ ವಿತರಿಸಲಾಯಿತು. ಹಾಗೂ ವಿಭಾಗದ ಉತ್ತಮ ಶೈಕ್ಷಣಿಕ ಶ್ರೇಷ್ಠತೆ ಹೊಂದಿದ ವಿದ್ಯಾರ್ಥಿಗಳನ್ನು ಗೌರವಿಸಲಾಯಿತು.

ಉಪಪ್ರಾಂಶುಪಾಲೆ ಡಾ.ಶೈಲಾ ಎಂ.ಪೈ ಸ್ವಾಗತಿಸಿದರು. ಡಾ.ಸುಪ್ರಿಯಾ ಎಚ್.ವಂದಿಸಿದರು.