ಜಿಲ್ಲೆ

ಆಸಕ್ತ ಕ್ಷೇತ್ರಗಳ ಆಯ್ಕೆಯಿಂದ ಸ್ಪರ್ಧಾ ಸಾಮರ್ಥ್ಯ ವೃದ್ಧಿ : ಅನಿಲ್ ಕುಮಾರ್ ಎಸ್.ಎಸ್. ಅಭಿಪ್ರಾಯ

ಸೌಮ್ಯ ಆರ್

ಬೆಳ್ತಂಗಡಿ: ಯುವಕರ ಆಸಕ್ತಿಗೆ ಅನುಗುಣವಾದ ಉದ್ಯೋಗಾವಕಾಶಗಳ ಲಭ್ಯತೆ ಮತ್ತು ಸದ್ಬಳಕೆಯಿಂದ ಭಾರತವು ವಿವಿಧ ರಂಗಗಳಲ್ಲಿ ವಿಶ್ವಮಟ್ಟದ ಸ್ಪರ್ಧೆಯನ್ನೊಡ್ಡಿ ಮುಂಚೂಣಿ ಸ್ಥಾನ ಗಳಿಸಬಹುದು ಎಂದು ಧರ್ಮಸ್ಥಳದ ಎಸ್‌ಕೆಡಿಆರ್‌ಡಿಪಿ ಬಿ.ಸಿ.ಟ್ರಸ್ಟ್ ಸಿಇಒ ಅನಿಲ್ ಕುಮಾರ್ ಎಸ್.ಎಸ್. ಹೇಳಿದರು.

ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಸ್ನಾತಕೋತ್ತರ ಕೇಂದ್ರದ ಸಮಾಜಕಾರ್ಯ ಅಧ್ಯಯನ ಮತ್ತು ಸಂಶೋಧನಾ ವಿಭಾಗ ಮತ್ತು ವ್ಯಾಜಿಕ್ ಬಸ್ ಇಂಡಿಯಾ ಫೌಂಡೇಶನ್ ಹಾಗೂ ರಿಲಯನ್ಸ್ ಫೌಂಡೇಶನ್ ಸಹಯೋಗದಲ್ಲಿ ಆಯೋಜಿತ ವೃತ್ತಿಪರ ತರಬೇತಿ ಕಾರ್ಯಾಗಾರವನ್ನು ಸೋಮವಾರ ಉದ್ಘಾಟಿಸಿ ಮಾತನಾಡಿದರು.

ಬೆಂಗಳೂರಿನ ಮ್ಯಾಜಿಕ್ ಬಸ್ ಫೌಂಡೇಶನ್ ಎಂಸಿಎಸ್‌ಆರ್ ಪ್ರಾಜೆಕ್ಟ್ ಮ್ಯಾನೇಜರ್ ಧವನ್ ಗೌಡ ಶುಭಹಾರೈಸಿದರು. ಎಸ್‌ಡಿಎಂ ಕಾಲೇಜಿನ ಪ್ರಾಂಶುಪಾಲ ಪ್ರೊ.ವಿಶ್ವನಾಥ ಪಿ. ಅಧ್ಯಕ್ಷತೆ ವಹಿಸಿದ್ದರು. ಸಮಾಜಕಾರ್ಯ ವಿಭಾಗದ ಮುಖ್ಯಸ್ಥ ಡಾ.ರವಿಶಂಕರ್ ಕೆ.ಆರ್. ಉಪಸ್ಥಿತರಿದ್ದರು. ಡಾ.ಅತುಲ್ ಎಸ್.ಸೆಮಿತ್ ಸ್ವಾಗತಿಸಿದರು. ಸ್ವಾತಿ ಬಿ. ಸ್ವಾಗತಿಸಿದರು. ಡಾ.ದಾನೇಶ್ವರಿ ವಂದಿಸಿದರು.