ಜಿಲ್ಲೆ

ಪಿಪಿಸಿ ಪ್ರಾಂಶುಪಾಲರಾಗಿ ಸಂತೋಷಕುಮಾರ ನೇಮಕ...

ವಿಜಯವಾಣಿ ಸುದ್ದಿಜಾಲ ಉಡುಪಿ

ಉಡುಪಿಯ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನ ನೂತನ ಪ್ರಾಂಶುಪಾಲರಾಗಿ ವಾಣಿಜ್ಯ ಶಾಸ್ತ್ರ ಪ್ರಾಧ್ಯಾಪಕ ಸಂತೋಷಕುಮಾರ ನೇಮಕವಾಗಿದ್ದು, ಗುರುವಾರ ಅಧಿಕಾರ ಸ್ವೀಕರಿಸಿದರು.

ಪೂರ್ಣಪ್ರಜ್ಞ ಸಂಧ್ಯಾ ಕಾಲೇಜಿನಲ್ಲಿ 11 ವರ್ಷಗಳ ಕಾಲ ವಾಣಿಜ್ಯ ವಿಭಾಗದ ಪ್ರಾಧ್ಯಾಪಕರಾಗಿ, ವಿಭಾಗದ ಮುಖ್ಯಸ್ಥರಾಗಿ ಹಾಗೂ 10 ವರ್ಷದಿಂದ ಪೂರ್ಣಪ್ರಜ್ಞ ಪದವಿ ಪೂರ್ವ ಕಾಲೇಜಿನಲ್ಲಿ ವಾಣಿಜ್ಯ ಶಾಸ್ತ್ರ ವಿಭಾಗದ ಉಪನ್ಯಾಸಕರಾಗಿದ್ದರು.

ಕಾಪು ವಿದ್ಯಾನಿಕೇತನ ಪದವಿ ಪೂರ್ವ ಕಾಲೇಜಿನ ಪ್ರಾಂಶುಪಾಲರಾಗಿಯೂ ಸೇವೆ ಸಲ್ಲಿಸಿದ್ದರು. ಸಿಎ, ಸಿಎಸ್​, ಸಿಎಂಎ ಕೋರ್ಸ್​ಗಳ ಸಂಯೋಜಕರಾಗಿ ನೂರಾರು ವಿದ್ಯಾರ್ಥಿಗಳಿಗೆ ತರಬೇತಿ ನೀಡಿದ ಹಿರಿಮೆ ಅವರದ್ದು.

ಅಧಿಕಾರ ಸ್ವೀಕಾರ ಕಾರ್ಯಕ್ರಮದಲ್ಲಿ ಅದಮಾರು ಮಠ ಶಿಕ್ಷಣ ಸಂಸ್ಥೆಯ ಗೌರವ ಪ್ರಧಾನ ಕಾರ್ಯದರ್ಶಿ ಡಾ. ಎ.ಪಿ. ಭಟ್​ ಅಧ್ಯಕ್ಷತೆ ವಹಿಸಿದ್ದರು. ಪ.ಪೂ. ಕಾಲೇಜಿನ ಆಡಳಿತ ಮಂಡಳಿಯ ಗೌರವ ಕಾರ್ಯದರ್ಶಿ ಡಾ. ಪಿ.ಎಸ್​. ಐತಾಳ ಅವರು ನೇಮಕದ ಆದೇಶ ಪತ್ರ ನೀಡಿ ಅಭಿನಂದಿಸಿದರು.

ನಿರ್ಗಮನ ಪ್ರಾಂಶುಪಾಲೆ ಪ್ರತಿಮಾ ಬಾಳಿಗಾ ಅಧಿಕಾರ ಹಸ್ತಾಂತರಿಸಿದರು. ಗೌರವ ಕೋಶಾಧಿಕಾರಿ ಸಿಎ ಟಿ.ಪ್ರಶಾಂತ ಹೊಳ್ಳ, ಸಂಧ್ಯಾ ಕಾಲೇಜಿನ ಪ್ರಾಂಶುಪಾಲೆ ಡಾ. ಸುಕನ್ಯಾ ಮೇರಿ ಉಪಸ್ಥಿತರಿದ್ದರು.

ಕನ್ನಡ ಉಪನ್ಯಾಸಕ ರಮಾನಂದ ರಾವ್​ ಸ್ವಾಗತಿಸಿದರು. ಉಡುಪಿ ಪೂರ್ಣಪ್ರಜ್ಞ ಶಿಕ್ಷಣ ಸಂಸ್ಥೆಯ ಆಡಳಿತಾಧಿಕಾರಿ ಪುಂಡರೀಕಾಕ್ಷ ಕೊಡಂಚ ಕಾರ್ಯಕ್ರಮ ನಿರೂಪಿಸಿದರು. ಪ್ರಾಧ್ಯಾಪಕ ಧೀರಜ ವಂದಿಸಿದರು.