ಕುಂದಾಪುರ: ಕಥೊಲಿಕ್ ಸಭಾ ಕುಂದಾಪುರ ಚರ್ಚ್ ಟಕ ವತಿಯಿಂದ ಕುಂದಾಪುರ ಹೋಲಿ ರೋಜರಿ ವಾತಾ ಇಗರ್ಜಿಯ ಮೈದಾನದಲ್ಲಿ ಕುಂದಾಪುರ ನಗರ ಯೋಜನ ಪ್ರಾಧಿಕಾರ ಅಧ್ಯಕ್ಷ ವಿನೋದ್ ಕ್ರಾಸ್ಟೊ ಧ್ವಜಾರೋಹಣ ನೆರವೇರಿಸಿದರು.
ಸಂತ ಜೋಸೆಪ್ ಕಾನ್ವೆಂಟಿನ ಮುಖ್ಯಸ್ಥೆ ಭಗಿನಿ ಸುಪ್ರಿಯಾ, ಪಾಲನ ಮಂಡಳಿ ಉಪಾಧ್ಯಕ್ಷೆ ಶಾಲೆಟ್ ರೆಬೆಲ್ಲೊ, ಕಾರ್ಯದರ್ಶಿ ಆಶಾ ಕರ್ವಾಲ್ಲೊ, ಸರ್ವ ಆಯೋಗಗಳ ಸಂಯೋಜಕಾರದ ಪ್ರೇವಾ ಡಿಕುನ್ಹಾ, ಟಕ ನಿಕಟಪೂರ್ವ ಅಧ್ಯಕ್ಷೆ ಶೈಲಾ ಡಿಆಲ್ಮೇಡಾ, ಕಥೊಲಿಕ್ ಸಭಾದ ಪದಾಧಿಕಾರಿಗಳಾದ ಬರ್ನಾಡ್ ಡಿಕೋಸ್ತಾ, ಜೋಸೆಫ್ ಡಿಸೋಜ, ವಿನಯಾ ಡಿಕೋಸ್ತಾ, ಕ್ಲಿಫರ್ಡ್ ಡಿಸಿಲ್ವಾ, ಜೋನ್ ವಾಸ್ಟರ್ ಮುಂತಾದವರು ಉಪಸ್ಥಿತರಿದ್ದರು.
ಕಥೊಲಿಕ್ ಸಭಾ ಕುಂದಾಪುರ ಟಕ ಅಧ್ಯಕ್ಷ ವಿಲ್ಸನ್ ಡಿಆಲ್ಮೇಡಾ ಸ್ವಾಗತಿಸಿ, ಕಾರ್ಯದರ್ಶಿ ಶಾಂತಿ ಪಿಂಟೊ ವಂದಿಸಿದರು. ಜೂಲಿಯೆಟ್ ಪಾಯ್ಸ ನಿರೂಪಿಸಿದರು.