ಚಿಕ್ಕೋಡಿ: ಕೆಎಲ್‌ಇ ಸಂಸ್ಥೆ ಕಾರ್ಯಾಧ್ಯಕ್ಷ ಡಾ.ಪ್ರಭಾಕರ ಕೋರೆ ಮಾರ್ಗದರ್ಶನ ಹಾಗೂ ರಾಷ್ಟ್ರೀಯ ಸಹಕಾರಿ ಸಕ್ಕರೆ ಕಾರ್ಖಾನೆಗಳ ಮಹಾಮಂಡಳ ನವದೆಹಲಿ ನಿರ್ದೇಶಕರಾದ ಅಮಿತ್ ಕೋರೆ ಮುಂದಾಳತ್ವದಲ್ಲಿ ಕಾರ್ಖಾನೆ ಪ್ರಗತಿ ಸಾಧಿಸುತ್ತಿದೆ ಎಂದು ಕಾರ್ಖಾನೆ ಅಧ್ಯಕ್ಷ ಮಲ್ಲಿಕಾರ್ಜುನ ಕೋರೆ ಹೇಳಿದರು.
ಪಟ್ಟಣದ ಚಿದಾನಂದ ಬಸಪ್ರಭು ಕೋರೆ ಸಹಕಾರಿ ಸಕ್ಕರೆ ಕಾರ್ಖಾನೆಯಲ್ಲಿ ಗಣರಾಜ್ಯೋತ್ಸ ದಿನಾಚರಣೆಯಲ್ಲಿ ಮಾತನಾಡಿ, ಅಧಿಕಾರಿ ವರ್ಗ, ಕಾರ್ಮಿಕರು ವಹಿಸಿಕೊಟ್ಟ ಕೆಲಸದ ಜವಾಬ್ದಾರಿ ಅರಿತು ಉತ್ತಮವಾಗಿ ಕೆಲಸ ನಿರ್ವಹಿಸಬೇಕು ಎಂದರು. ಕಾರ್ಖಾನೆ ವ್ಯವಸ್ಥಾಪಕ ನಿರ್ದೇಶಕ ಡಾ. ಆರ್.ಬಿ. ಖಾಂಡಗಾವೆ ಮಾತನಾಡಿ, ದೇಶದ ಜಗತ್ತಿನಲ್ಲೇ ದೊಡ್ಡ ಸಂವಿಧಾನ ಹೊಂದಿದೆ.
ನಾವೆಲ್ಲರೂ ಸಂವಿಧಾನದ ಆಶಯದಂತೆ ನಡೆದು ದೇಶದ ಅಭಿವೃದ್ಧಿಗೆ ಶ್ರಮಿಸೋಣ ಎಂದು ತಿಳಿಸಿದರು. ಕಾರ್ಖಾನೆ ಉಪಾಧ್ಯಕ್ಷ ತಾತ್ಯಾಸಾಹೇಬ ಕಾಟೆ, ನಿರ್ದೇಶಕರಾ ಮಹಾವೀರ ಕಾತ್ರಾಳೆ, ಭೀಮಗೌಡ ಪಾಟೀಲ, ಅಣ್ಣಾಸಾಹೇಬ ಇಂಗಳೆ ಇತರರಿದ್ದರು.