ಜಿಲ್ಲೆ

ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಕುರಿತ ಪ್ರಗತಿ ಪರಿಶೀಲನಾ ಸಭೆ

ವಿಜಯವಾಣಿ ಸುದ್ದಿಜಾಲ ಧಾರವಾಡ

ರಾಜ್ಯದ ಜನತೆಯ ಬದುಕು ಸುಧಾರಿಸಲು ಮತ್ತು ಅಭಿವೃದ್ಧಿಯಲ್ಲಿ ಎಲ್ಲರೂ ಭಾಗವಹಿಸಬೇಕು. ಈ ಹಿತ ಸಾಧನೆಗಾಗಿ ರಾಜ್ಯ ಸರ್ಕಾರ ಅನುಷ್ಠಾನಗೊಳಿಸಿರುವ ಪಂಚ ಗ್ಯಾರಂಟಿ ಯೋಜನೆಗಳನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು. ಅಧಿಕಾರಿಗಳು ಕೇವಲ ಮಾತಾಡದೆ ಜವಾಬ್ದಾರಿಯಿಂದ ಕೆಲಸ ನಿರ್ವಹಿಸಬೇಕು ಎಂದು ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಧಿಕಾರದ ಜಿಲ್ಲಾ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.

ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಗುರುವಾರ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕಾರ್ಯವಿಧಾನ ಮತ್ತು ಗ್ಯಾರಂಟಿ ಯೋಜನೆಗಳ ಪರಿಣಾಮಕಾರಿ ಜಾರಿ ಕುರಿತ ಪ್ರಗತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.

ಗೃಹಜ್ಯೋತಿ ಯೋಜನೆಯಡಿ ಅರ್ಹ ಫಲಾನುಭವಿಗಳಿಗೆ ಸೌಲಭ್ಯ ಸಿಗಬೇಕು. ಗ್ರಾಮೀಣ ಭಾಗದ ಕೆಲ ಲೈನ್‌ಮನ್‌ಗಳು ವಿದ್ಯುತ್ ತೊಂದರೆಗಳನ್ನು ಪರಿಹರಿಸದೆ ತಮ್ಮ ಸಹಾಯಕರನ್ನು ನೇಮಿಸಿಕೊಂಡು ಅವರಿಂದ ಮಾಡಿಸುತ್ತಾರೆ. ತರಬೇತಿ ಇಲ್ಲದ ಹಾಗೂ ಕಂಪನಿ ಅನುಮತಿ ಇಲ್ಲದವರನ್ನು ನೇಮಿಸಿಕೊಂಡಿರುವುದರಿ0ದ ಅಮಾಯಕರು ವಿದ್ಯುತ್ ಅವಘಡದಲ್ಲಿ ಪ್ರಾಣ ಕಳೆದುಕೊಳ್ಳಬಹುದು. ಹೆಸ್ಕಾಂ ಅಽಕಾರಿಗಳು ಮಾಹಿತಿ ಇದ್ದರೂ ಕಠಿಣ ಕ್ರಮ ಕೈಗೊಳ್ಳುತ್ತಿಲ್ಲ. ಹೆಸ್ಕಾಂ ವ್ಯವಸ್ಥಾಪಕ ನಿರ್ದೇಶಕರು ಗಂಭೀರವಾಗಿ ಪರಿಗಣಿಸಬೇಕು ಎಂದರು.

ಶಕ್ತಿ ಯೋಜನೆ, ಅನ್ನ ಭಾಗ್ಯ ಯೋಜನೆ, ಗೃಹಲಕ್ಷ್ಮೀ ಯೋಜನೆ ಮತ್ತು ಯುವ ನಿಽ ಯೋಜನೆಗಳ ಅನುಷ್ಠಾನದಲ್ಲಿ ಲೋಪವಾಗದಂತೆ ಎಚ್ಚರ ವಹಿಸಬೇಕು. ಅರ್ಹ ಫಲಾನುಭವಿಗಳು ಸರ್ಕಾರದ ಯೋಜನೆಗಳಿಂದ ಹೊರಗುಳಿಯದಂತೆ ಮುಂಜಾಗ್ರತೆ ವಹಿಸಬೇಕು ಎಂದರು.

ಜಿ.ಪ0. ಉಪ ಕಾರ್ಯದರ್ಶಿ ಬಿ.ಎಸ್. ಮೂಗನೂರಮಠ ನಿರ್ವಹಿಸಿದರು. ಜಿಲ್ಲಾ ಪ್ರಾಧಿಕಾರದ ಉಪಾಧ್ಯಕ್ಷ ಮುರಗಯ್ಯ ವಿರಕ್ತಮಠ, ಶಾಂತಪ್ಪ ಅಕ್ಕಿ, ರೇಹನ್‌ರಝಾ ಐನಾಪೂರಿ, ರತ್ನಾ ತೇಗೂರಮಠ ವೇದಿಕೆಯಲ್ಲಿದ್ದರು.

ಜಿಲ್ಲಾ ಪ್ರಾಧಿಕಾರದ ಸದಸ್ಯರಾದ ಅರವಿಂದ ಏಗನಗೌಡರ, ಬಸಪ್ಪ ಮಹಾಬಳೇಶ್ವರ ಬಾವಕಾರ, ಅಬ್ದುಲಗಣಿ ಅಹ್ಮದವಾಲಿ, ಅಬ್ದುಲ್‌ರಸೀದ್ ಬೋಳಾಬಾಯಿ ಹಾಗೂ ಗ್ಯಾರಂಟಿ ಅನುಷ್ಠಾನ ಇಲಾಖೆಗಳ ಜಿಲ್ಲಾಮಟ್ಟದ ಅಽಕಾರಿಗಳು ಉಪಸ್ಥಿತರಿದ್ದರು.