ಜಿಲ್ಲೆ

ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಿ

ವಿಜಯವಾಣಿ ಸುದ್ದಿಜಾಲ ಧಾರವಾಡ
ಗ್ಯಾರಂಟಿ ಯೋಜನೆಗಳನ್ನು ಫಲಾನುಭವಿಗಳಿಗೆ ತಲುಪಿಸಲು ಅಽಕಾರಿಗಳು ಗಮನ ಹರಿಸಬೇಕು ಎಂದು ಜಿಲ್ಲಾ ಮಟ್ಟದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ಅಧ್ಯಕ್ಷ ಎಸ್.ಆರ್. ಪಾಟೀಲ ಹೇಳಿದರು.
ನಗರದ ಜಿಲ್ಲಾ ಪಂಚಾಯಿತಿ ಸಭಾಂಗಣದಲ್ಲಿ ಶನಿವಾರ ಆಯೋಜಿಸಿದ್ದ ಸರ್ಕಾರದ ಗ್ಯಾರಂಟಿ ಯೋಜನೆಗಳ ಅನುಷ್ಠಾನ ಕುರಿತ ಪ್ರಗತಿ ಪರಿಶೀಲನೆ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ಅಳ್ಳಾವರ ಮತ್ತು ಕುಂದಗೋಳ ತಾಲೂಕಿನ ಕೆಲ ಭಾಗಗಳಲ್ಲಿ ಸಾರಿಗೆ ಬಸ್‌ಗಳ ಹೆಚ್ಚಿನ ಬೇಡಿಕೆ ಇದೆ. ಶಾಲೆ- ಕಾಲೇಜು ವಿದ್ಯಾರ್ಥಿಗಳು ಹಾಗೂ ಸಾರ್ವಜನಿಕರಿಗೆ ತೊಂದರೆಯಾಗದAತೆ ಸಮರ್ಪಕ ಬಸ್ ವ್ಯವಸ್ಥೆ ಕಲ್ಪಿಸಬೇಕು. ಗೃಹಲಕ್ಷಿ÷್ಮÃ ಯೋಜನೆಯಡಿ ಫಲಾನುಭವಿಗಳಿಗೆ 2,000 ರೂಪಾಯಿ ತಲುಪುತ್ತಿಲ್ಲ ಎಂಬ ದೂರುಗಳು ಕೇಳಿಬಂದಿವೆ. ಅವುಗಳನ್ನು ತ್ವರಿತವಾಗಿ ನಿವಾರಿಸಬೇಕು ಎಂದರು.
ಯುವನಿಽ ಯೋಜನೆಯ ಪ್ರಚಾರಕ್ಕೆ ಎಲ್ಲ ಕಾಲೇಜು, ವಿಶ್ವವಿದ್ಯಾಲಯಗಳಲ್ಲಿ ಸಹಾಯ ಕೇಂದ್ರಗಳನ್ನು ತೆರೆಯಬೇಕು ಎಂದು ಸೂಚಿಸಿದರು.
ಪ್ರತಿಯೊಂದು ನ್ಯಾಯಬೆಲೆ ಅಂಗಡಿಯಲ್ಲಿ ಮಾಹಿತಿ ಫಲಕ ಅಳವಡಿಸಲು ಹಿಂದಿನ ಸಭೆಯಲ್ಲಿ ಸೂಚಿಸಲಾಗಿತ್ತು. ಆದರೂ ಫಲಕ ಅಳವಡಿಸದಿರುವುದೇಕೆ ಎಂದು ಅಽಕಾರಿಗಳನ್ನು ಪ್ರಶ್ನಿಸಿದರು.
ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯನಿರ್ವಾಹಕ ಅಽಕಾರಿ ಸ್ವರೂಪ ಟಿ.ಕೆ., ಆಹಾರ ಇಲಾಖೆಯ ಜಂಟಿ ನಿರ್ದೇಶಕ ಚನ್ನಬಸಪ್ಪ ಕೊಡ್ಲಿ, ಜಿಲ್ಲಾ ಕೌಶಲ್ಯ ಅಭಿವೃದ್ಧಿ ಅಽಕಾರಿ ರವೀಂದ್ರ ದ್ಯಾಬೇರಿ, ಗ್ಯಾರಂಟಿ ಯೋಜನೆಗಳ ಅನುಷ್ಠಾನ ಪ್ರಾಽಕಾರದ ಉಪಾಧ್ಯಕ್ಷರಾದ ಮುರಗಯ್ಯಾ ವಿರಕ್ತಮಠ, ಅರವಿಂದ ಏಗನಗೌಡರ, ಅಬ್ದುಲ್ ರಶೀದ ಬೋಳಾಬಾಯಿ ಹಾಗೂ ರತ್ನಾ ತೇಗೂರಮಠ ಇದ್ದರು.