Progress Review Meeting  
ಜಿಲ್ಲೆ

ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಽನಿಯಮ ೨೦೧೬ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆ *ಅಂಗವಿಕಲ ವಿದ್ಯಾರ್ಥಿಗಳಿಗೆ ವಸತಿ ಶಾಲೆಗಳಿಗೆ ನೇರ ಪ್ರವೇಶ

ರಾಯಚೂರು ಮುಂದಿನ ದಿನಗಳಲ್ಲಿ ಅಂಗವಿಕಲ ವಿದ್ಯಾರ್ಥಿಗಳಿಗೆ ರಾಜ್ಯದ ಎಲ್ಲಾ ವಸತಿ ಶಾಲೆಗಳಲ್ಲಿ ಪ್ರವೇಶ ಪರೀಕ್ಷೆಗಳಿಲ್ಲದೇ ನೇರವಾಗಿ ಪ್ರವೇಶ ಕಲ್ಪಿಸಿ ಉಚಿತ ಶಿಕ್ಷಣದ ಅವಕಾಶವನ್ನು ನೀಡಲಾಗುವುದೆಂದು ಅಂಗವಿಕಲರ ಅಽನಿಯಮ ಅನುಷ್ಠಾನದ ರಾಜ್ಯ ಆಯುಕ್ತರಾದ ಶ್ರೀದಾಸ್ ಸೂರ್ಯವಂಶಿ ಅವರು ಹೇಳಿದರು.

ನಗರದ ಜಿಪಂ ಸಭಾಂಗಣದಲ್ಲಿ ವಿಕಲಚೇತನರ ಹಾಗೂ ಹಿರಿಯ ನಾಗರಿಕರ ಸಬಲೀಕರಣ ಇಲಾಖೆ ಏರ್ಪಡಿಸಿದ್ದ ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಽನಿಯಮ ೨೦೧೬ರ ಅನುಷ್ಠಾನದ ಪ್ರಗತಿ ಪರಿಶೀಲನಾ ಸಭೆಯಲ್ಲಿ ಮಾತನಾಡಿ,

ರಾಜ್ಯ ಸರ್ಕಾರ ಅಽÃನದಲ್ಲಿರುವ ಸುಮಾರು ೯೦೦ ವಸತಿ ಶಾಲೆಗಳಲ್ಲಿ ಶೇ.೨೫ ಪ್ರತಿಶತ ಅಂಗವಿಕಲತೆ ಹೊಂದಿದ ಮಕ್ಕಳಿಗೆ ಯಾವುದೇ ಪ್ರವೇಶಾತಿ ಪರೀಕ್ಷೆಗಳಿಲ್ಲದೇ ೧೨ನೇ ತರಗತಿವರೆಗೆ ಉಚಿತ ಶಿಕ್ಷಣ ನೀಡಲು ಅವಕಾಶವಿದೆ. ಶಾಲಾ ಶಿಕ್ಷಣ ಇಲಾಖೆ ಅಂಧ ಮತ್ತು ಕಿವುಡ ಮಕ್ಕಳಿಗೆ ಶಿಕ್ಷಣದಿಂದ ವಂಚಿತರಾಗದಿರಲು ಹಾಗೂ ಬ್ರೈಲ್ ಲಿಪಿ ಅಳವಡಿಸಿ ಶಿಕ್ಷಣ ನೀಡುವಲ್ಲಿ ಪ್ರಮುಖ ಪಾತ್ರ ವಹಿಸಬೇಕಿದೆ. ಬ್ರೈಲ್ ಲಿಪಿ ಕಲಿತ ಅಂಧರು ಸುಮಾರು ೧೨ ಜನ ಐಎಎಸ್ ಅಽಕಾರಿಗಳಾಗಿ ಸೇವೆ ಸಲ್ಲಿಸುತ್ತಿದ್ದಾರೆ ಎಂದರು.

ಕೇಂದ್ರ ಹಾಗೂ ರಾಜ್ಯ ಸರ್ಕಾರದ ವಿವಿಧ ಇಲಾಖೆಗಳ ನೇಮಕಾತಿಯಲ್ಲಿ ಅಂಗವಿಕಲರಿಗಾಗಿಯೇ ಇರುವ ಶೇ.೪ ರಿಂದ ೫ರಷ್ಟು ಮೀಸಲಾತಿ ಇದ್ದು, ಅದರ ಪರಿಶೀಲನೆಗಾಗಿ ವಿವಿಧ ಜಿಲ್ಲೆಗಳಲ್ಲಿ ಪ್ರವಾಸ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ. ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಽನಿಯಮ-೨೦೧೬ ಅನುಷ್ಠಾನಗೊಳಿಸುವಲ್ಲಿ ವಿವಿಧ ಇಲಾಖೆಯ ಜಿಲ್ಲಾ ಮಟ್ಟದ ಅಽಕಾರಿಗಳು ಪ್ರಾಮಾಣಿಕತೆಯಿಂದ ಸೇವೆ ನೀಡಬೇಕಿದೆ ಎಂದರು.

ಆರೈಕೆದಾರರರಿಗೆ ಮಾಸಾಶನ

ದೇಶದಲ್ಲಿ ಮೊಟ್ಟಮೊದಲ ಬಾರಿಗೆ ಕರ್ನಾಟಕದಲ್ಲಿ ವಿಶೇಷÀ ಚೇತನರ ಆರೈಕೆದಾರರರಿಗೆ ಮಾಸಾಶನ ನೀಡಲು ಕ್ರಮ ವಹಿಸಲಾಗಿದ್ದು, ಮುಂದಿನ ದಿನಗಳಲ್ಲಿ ಆರಂಭಿಸಲು ಚಿಂತನೆ ನಡೆಸಲಾಗಿದೆ. ಇದರಿಂದ ಅಂಗವಿಕಲರ ಆರೈಕೆ ಮಾಡುವ ಪಾಲಕರಿಗೆ ಪ್ರೋತ್ಸಾಹ ನೀಡಿದಂತಾಗಲಿದೆ. ವಿವಿಧ ಯೋಜನೆಗಳ -Àಲಾನುಭವಿಗಳ ಆಯ್ಕೆಗೆ ನಿಗಽತ ಯ್ಯಾಪ್‌ಗಳನ್ನು ರಚಿಸಲಾಗಿದ್ದು, ಯ್ಯಾಪ್ ಮೂಲಕ ಸಮಗ್ರ ಮಾಹಿತಿಯನ್ನು ಪಡೆಯಬಹುದಾಗಿದೆ.

೫೦ ಲಕ್ಷದವರೆಗೆ ಸಾಲಸೌಲಭ್ಯ

ದೇಶದಲ್ಲೇ ಕರ್ನಾಟಕ ರಾಜ್ಯ ಅಂಗವಿಕಲರಿಗೆ ಪುನರ್ವಸತಿ ಕಲ್ಪಿಸುವಲ್ಲಿ ಮಾದರಿಯಾಗಿದೆ. ರಾಷ್ಟಿ÷್ರÃಯ ಅಂಗವಿಕಲರ ಅಭಿವೃದ್ಧಿ ಹಣಕಾಸು ಸಂಸ್ಥೆಯ ಮೂಲಕ ಪ್ರತಿ ವಷÀð ರಾಜ್ಯಕ್ಕೆ ೧೦೦ ಕೋಟಿ ರೂ. ಅನುದಾನ ತರಬಹುದಾಗಿದ್ದು, ಅಂಗವಿಕಲರಿಗೆ ೫೦ ಲಕ್ಷದವರೆಗೆ ಸಾಲಸೌಲಭ್ಯ ಹಾಗೂ ಇತರೆ ಅಭಿವೃದ್ಧಿ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳಬಹುದಾಗಿದೆ. ವಿಕಲಚೇತನ ವ್ಯಕ್ತಿಗಳಿಗೆ ಅಗತ್ಯವಿರುವ ಆರೋಗ್ಯ, ಶೈಕ್ಷಣಿಕ, ಉದ್ಯೋಗ ಮತ್ತು ತರಬೇತಿ ಹಾಗೂ ಸಾಮಾಜಿಕ ಭದ್ರತೆಗಳಂತಹ ಪುನರ್ವಸತಿ ಸೇವೆಗಳನ್ನು ಕಲ್ಪಿಸುವುದರ ಮೂಲಕ ಅವರಿಗೆ ಸಮಾನ ಅವಕಾಶ ಕಲ್ಪಿಸಿ ಅವರನ್ನು ಮುಖ್ಯವಾಹಿನಿಗೆ ತರುವ ಉದ್ದೇಶದಿಂದ ಕೇಂದ್ರ ಸರ್ಕಾರವು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಽನಿಯಮ-೨೦೧೬ನ್ನು ಜÁರಿಗೆ ತಂದಿದ್ದು, ಈ ಅಽನಿಯಮವನ್ನು ಕರ್ನಾಟಕ ರಾಜ್ಯದಲ್ಲಿ ಯಶಸ್ವಿಯಾಗಿ ಅನು?Á್ಠನಗೊಳಿಸಲು ರಾಜ್ಯ ಸರ್ಕಾರವು ಕರ್ನಾಟಕ ರಾಜ್ಯ ಅಂಗವಿಕಲ ವ್ಯಕ್ತಿಗಳ ನಿಯಮಗಳು-೨೦೧೯ನ್ನು ರೂಪಿಸಿದೆ. ವಿಕಲಚೇತನ ವ್ಯಕ್ತಿಗಳನ್ನು ಸಬಲೀಕರಣಗೊಳಿಸುವುದರ ಮೂಲಕ ಅವರ ಹಕ್ಕುಗಳನ್ನು ಸಂರಕ್ಷಿಸಲು ಅಂಗವಿಕಲ ವ್ಯಕ್ತಿಗಳ ಹಕ್ಕುಗಳ ಅಽನಿಯಮ ೨೦೧೬ ರಲ್ಲಿ ಅವಕಾಶ ಕಲ್ಪಿಸಲಾಗಿದೆ ಎಂದರು.

ಈ ಸಂದರ್ಭದಲ್ಲಿ ಅಪರ ಜಿಲ್ಲಾಽಕಾರಿ ಶಿವಾನಂದ, ಜಿಲ್ಲಾ ಪಂಚಾಯತ್ ಉಪ ಕಾರ್ಯದರ್ಶಿ ಶಶಿಕಾಂತ್ ಶಿವಪೂರೆ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಉಪ ನಿರ್ದೇಶಕರಾದ ನವೀನ್ ಕುಮಾರ್, ಜಿಲ್ಲಾ ಅಂಗವಿಲಕರ ಕಲ್ಯಾಣಾಽಕಾರಿ ಶ್ರೀದೇವಿ ಸೇರಿದಂತೆ ವಿವಿಧ ಇಲಾಖೆಯ ಅಽಕಾರಿ ಹಾಗೂ ಸಿಬ್ಬಂದಿಗಳು ಇದ್ದರು.