ಜಿಲ್ಲೆ

ವೈದ್ಯರ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮಾರಾಟ ನಿಷೇಧ

ಉಡುಪಿ: ಜಿಲ್ಲಾದ್ಯಂತ ವ್ಯಾಪಕವಾಗಿ ಡೆಂಘೆ ಹಾಗೂ ಇತರ ಕೆಲವು ಸಾಂಕ್ರಾಮಿಕ ರೋಗ ಪ್ರಕರಣಗಳು ಹೆಚ್ಚಾಗುತ್ತಿದ್ದು, ರೋಗಿಗಳು ಸ್ವ ಔಷಧೋಪಾಚಾರ ವಾಡಿಕೊಳ್ಳುವುದರಿಂದ ಸರಿಯಾದ ಚಿಕಿತ್ಸೆ ದೊರೆಯದೆ ಪ್ರಾಣಾಪಾಯಗಳು ಸಂಭವಿಸುವ ಸಾಧ್ಯತೆ ಇವೆ. ಮುಂಜಾಗ್ರತಾ ಕ್ರಮವಾಗಿ ಜಿಲ್ಲೆಯ ಎಲ್ಲ್ಲ ಔಷಧ ವ್ಯಾಪಾರಿಗಳು ಕಡ್ಡಾಯವಾಗಿ ವೈದ್ಯರ ಸಲಹಾ ಚೀಟಿ ಇಲ್ಲದೆ ಪ್ಯಾರಾಸಿಟಮಲ್ ಮತ್ತು ಇತರ ಆ್ಯಂಟಿ ಬಯೋಟಿಕ್ ಔಷಧಗಳ ಮಾರಾಟ ವಾಡಬಾರದೆಂದು ಉಡುಪಿ ಜಿಲ್ಲಾ ಸಹಾಯಕ ಔಷಧಿ ನಿಯಂತ್ರಕರು ಸೂಚಿಸಿದ್ದಾರೆ. ಜಿಲ್ಲೆಯ ಎಲ್ಲ ರಕ್ತ ಕೋಶ ಕೇಂದ್ರದವರು ರಕ್ತ ಹಾಗೂ ರಕ್ತ ಉತ್ಪನ್ನಗಳ ಕೊರತೆಯಾಗದಂತೆ ಕ್ರಮ ಕೈಗೊಳ್ಳಬೇಕು. ರಕ್ತದಾನಿಗಳ ಪಟ್ಟಿ ಸಿದ್ಧಪಡಿಸಿ ಅವಶ್ಯಕತೆಗೆ ಅನುಗುಣವಾಗಿ ರಕ್ತವನ್ನು ಪಡೆದು ದಾಸ್ತಾನು ಇಟ್ಟುಕೊಳ್ಳಬೇಕೆಂದು ತಿಳಿಸಿದ್ದಾರೆ.