ಜಿಲ್ಲೆ

ಪರೀಕ್ಷಾ ಕೇಂದ್ರಗಳ ಸುತ್ತ ನಿಷೇಧಾಜ್ಞೆ

ದತ್ತಾತ್ರೇಯ ಪಿ ಕುಲಕರ್ಣಿ

ಬಾಗಲಕೋಟೆ: ಜಿಲ್ಲೆಯಲ್ಲಿ ಜೂ.9 ರಿಂದ 20 ವರೆಗೆ ದ್ವಿತೀಯ ಪಿಯುಸಿ ಪರೀಕ್ಷೆ-3 ನಡೆಯಲಿದ್ದು, ಪರೀಕ್ಷೆಯು ಸೂಸುತ್ರವಾಗಿ ಮತ್ತು ದೋಷ ರಹಿತವಾಗಿ ನಡೆಸಲು ಭಾರತೀಯ ನಾಗರಿಕ ಸುರಕ್ಷಾ ಸಂಹಿತೆಯಡಿ ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರ್‌ವರೆಗೆ ಪ್ರದೇಶದ ವ್ಯಾಪ್ತಿಯಲ್ಲಿ ಪರೀಕ್ಷಾ ಕೇಂದ್ರದ ಸಿಬ್ಬಂದಿ ಮತ್ತು ಅಧಿಕಾರಿಗಳನ್ನು ಹೊರತುಪಡಿಸಿ ಸಾರ್ವಜನಿಕರಿಗೆ ಪ್ರವೇಶಿಸಲು ಅವಕಾಶವಿಲ್ಲ.

ಪರೀಕ್ಷಾ ಕೇಂದ್ರಗಳ ಸುತ್ತಲೂ 200 ಮೀಟರವರೆಗೆ ಝರಾಕ್ಸ್ ಅಂಗಡಿಗಳಿದ್ದಲ್ಲಿ ಪರೀಕ್ಷಾ ಅವಧಿಯಲ್ಲಿ ಮುಚ್ಚತಕ್ಕದ್ದು ಎಂದು ಜಿಲ್ಲಾಧಿಕಾರಿ ಜಾನಕಿ ಕೆ.ಎಂ ತಿಳಿಸಿದ್ದಾರೆ.