ಮೈಸೂರು: ಲಲಿತಮಹಲ್ ನಗರ ಮುಖ್ಯ ರಸ್ತೆಯ ಬ್ಯೂಟಿ ಪಾರ್ಲರ್‌ವೊಂದರಲ್ಲಿ ನಡೆಯುತ್ತಿದ್ದ ವೇಶ್ಯಾವಾಟಿ ದಂಧೆಯನ್ನು ಮಂಗಳವಾರ ಪೊಲೀಸರು ಪತ್ತೆ ಹಚ್ಚಿ, ಯುವತಿಯರನ್ನು ರಕ್ಷಿಸಿದ್ದಾರೆ.
ಖಚಿತ ಮಾಹಿತಿ ಮೇರೆಗೆ ನಗರ ಪೊಲೀಸ್ ಆಯುಕ್ತರು ಕಾರ್ಯಾಚರಣೆ ನಡೆಸಲು ವಿಶೇಷ ತಂಡವನ್ನು ರಚಿಸಿದ್ದರು. ಕಾರ್ಯಾಚರಣೆ ಸಂದರ್ಭ ವೇಶ್ಯಾವಾಟಿಕೆ ದಂಧೆ ಬಯಲಿಗೆ ಬಂದಿದೆ. ಆಲನಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.