ನೆಲಮಂಗಲ : ಗಿಡ ನೆಡುವ ಮೂಲಕ ಪರಸರ ಸಂರಕ್ಷಣೆ ಜತೆಗೆ ಸಕಲ ಜೀವರಾಶಿಯನ್ನೂ ಸಲಹುವ ಭೂಮಿಯನ್ನು ಸಂರಸುವುದು ನಮ್ಮೆಲ್ಲರ ಕರ್ತವ್ಯ ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ತಿಳಿಸಿದರು.
ಬೆಂಗಳೂರು ಉತ್ತರ ತಾಲೂಕಿನ ದಾಸನಪುರಯ ನಗರೂರು ಗ್ರಾಮದ ಶ್ರೀ ೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠದಲ್ಲಿ ರಾಜ್ಯ ಬಿಜೆಪಿ ರೈತ ಮೋರ್ಚಾದಿಂದ ಆಯೋಜಿಸಿದ್ದ ಗಿಡ ನೆಡುವ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ರಾಜಧಾನಿ ಬೆಂಗಳೂರು ಬೆಳೆಯುತ್ತಿದೆ. ಭೂಮಿಗೆ ಬಂಗಾರದ ಬೆಲೆ ಬಂದಿದ್ದು ಕೆಲವರು ಗಿಡಮರಗಳನ್ನು ಕಡಿದು ನಿವೇಶನ ಮಾಡಿ ಮಾರಾಟ ಮಾಡುವ ಮಾಡುತ್ತಿದ್ದಾರೆ. ಬೆಂಗಳೂರು ಸೇರಿ ಸುತ್ತಮುತ್ತಲಿನ ಜನರು ಪರಿಸರ ಮಾಲಿನ್ಯ ಸಮಸ್ಯೆ ಎದುರಿಸುತ್ತಿದ್ದು, ಗಿಡಗಳನ್ನು ನೆಡುವುದು ಅನಿವಾರ್ಯವಾಗಿದೆ. ಅದ್ದರಿಂದ ಪ್ರತಿಯೊಬ್ಬರ ಸಮಾಜಕ್ಕೆ ಪೂರಕ ವಾತಾವರಣ ನಿರ್ಮಿಸುವ ನಿಟ್ಟಿನಲ್ಲಿ ಸಸಿಗಳನ್ನು ಬೆಳೆಸುವ ಕಾರ್ಯಕ್ಕೆ ಮುಂದಾಗಬೇಕು.
ಮೋದಿ ಸರ್ಕಾರಕ್ಕೆ 11 ವರ್ಷ ತುಂಬಿದ ಹಿನ್ನಲೆ ಏಕ್ ಪೇಡ್ ಮಾ ಕೆ ನಾಮ್ ಎಂದು ತಾಯಿಯ ಹೆಸರಿನಲ್ಲಿ ಲಕ್ಷ ವೃಕ್ಷ ಅಭಿಯಾನ ಆರಂಭಿಸಿದ್ದಾರೆ. ಆದ್ದರಿಂದ ಪಕ್ಷದಿಂದ ಪ್ರತಿ ಬೂತ್ನಲ್ಲಿ ಸಸಿಗಳನ್ನು ನೆಡುವುದಕ್ಕೆ ತೀರ್ಮಾನಿಸಲಾಗಿದೆ. ರಾಜ್ಯದಲ್ಲಿ ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಚಾಲನೆ ದೊರಕಿದ್ದು, ಜಿಲ್ಲೆ, ತಾಲೂಕು, ಹೋಬಳಿ ಹಾಗೂ ಶಕ್ತಿಕೇಂದ್ರ ಸೇರಿ ಬೂತ್ ಮಟ್ಟದಲ್ಲಿ ಸಸಿ ನೆಡುವ ಕಾರ್ಯ ನಡೆಯುತ್ತಿದೆ ಎಂದರು.
ಜಿಲ್ಲಾ ಪ್ರಧಾನ ಕಾರ್ಯದರ್ಶಿ ರವಿಕುಮಾರ್, ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಭೃಂಗೇಶ್, ಪ್ರಧಾನ ಕಾರ್ಯದರ್ಶಿ ನಾಗೇಶ್, ಜಿಲ್ಲಾ ಕಾರ್ಯದರ್ಶಿ ರವಿ, ಬೆಂಗಳೂರು ನಗರ ಜಿಲ್ಲಾಧ್ಯಕ್ಷ ಜಿ.ಜೆ.ಮೂರ್ತಿ, ಪ್ರಧಾನ ಕಾರ್ಯದರ್ಶಿ ಮಾಲಾ, ನೆ.ಯೋ.ಪ್ರಾಧಿಕಾರ ಮಾಜಿ ಅಧ್ಯಕ್ಷ ಎಸ್.ಮಲ್ಲಯ್ಯ, ಮಾಜಿ ಸದಸ್ಯ ರಮೇಶ್, ಮಹಿಳಾ ಮೋರ್ಚಾ ಜಿಲ್ಲಾಧ್ಯೆ ಅನುರೆಡ್ಡಿ, ತಾಲೂಕು ಅಧ್ಯೆ ಮಂಜುಳಾ ಸುರೇಶ್, ಪ್ರಧಾನ ಕಾರ್ಯದರ್ಶಿ ಶೀಲಾ, ಎಸ್ಸಿ ಮೋರ್ಚಾ ತಾಲೂಕು ಅಧ್ಯಕ್ಷ ಉಮೇಶ್, ಎಸ್ಟಿ ಮೋರ್ಚಾ ತಾಲೂಕು ಅಧ್ಯಕ್ಷ ಕೆಂಪರಾಮಯ್ಯ, ಒಬಿಸಿ ಮೋರ್ಚಾ ಅಧ್ಯಕ್ಷ ಲೋಕೇಶ್, ರೈತ ಮೋರ್ಚಾ ತಾಲೂಕು ಅಧ್ಯಕ್ಷ ಅರುಣ್ಕುಮಾರ್, ನಗರಸಭೆ ಸದಸ್ಯ ರಾಮಮೂರ್ತಿ ಇದ್ದರು.
ಗಿಡ ನೆಡುವ ಕಾರ್ಯ : ಬಿಜೆಪಿ ರೈತ ಮೋರ್ಚಾದಿಂದ 60ಕ್ಕೂ ವಿವಿಧ ಗಿಡಗಳನ್ನು ಬಿಜೆಪಿ ನಾಯಕರು ಹಾಗೂ ಮುಖಂಡರ ಹೆಸರಿನಲ್ಲಿ ನೆಡಲಾಗಿದೆ. ಮುಂದಿನ ದಿನಗಳಲ್ಲಿ ರೈತ ಮೋರ್ಚಾದಿಂದ ಮತ್ತಷ್ಟು ಸಮಾಜಮುಖಿ ಕಾರ್ಯ ಮಾಡಲಾಗುವುದು ಎಂದು ಬಿಜೆಪಿ ರೈತ ಮೋರ್ಚಾ ಜಿಲ್ಲಾಧ್ಯಕ್ಷ ಕೆ.ಪಿ.ಭೃಂಗೇಶ್ ತಿಳಿಸಿದರು.
ಮಹಿಳೆಯರಿಗೆ ಮೀಸಲಾತಿ : ಕೇಂದ್ರ ಸರ್ಕಾರ ಸಾಕಷ್ಟು ಜನಪರ ಯೋಜನೆಗಳನ್ನು ಜಾರಿಗೊಳಿಸಿದೆ. ಜತೆಗೆ ಮಹಿಳೆಯರು ಹೆಚ್ಚು ರಾಜಕೀಯದಲ್ಲಿ ಗುರುತಿಸಿಕೊಳ್ಳುಬೇಕೆಂದು ಶೇ.33ರಷ್ಟು ಮೀಸಲಾತಿ ನೀಡಿದ್ದಾರೆ. ಇದನ್ನು ಸದುಪಯೋಗ ಪಡಿಸಿಕೊಂಡು ಮಹಿಳೆಯರು ಮತ್ತಷ್ಟು ಅಭಿವೃದ್ಧಿ ಹೊಂದಬೇಕು. ಜತೆಗೆ ಸ್ಥಳಿಯ ಬಿಜೆಪಿ ಮಂಡಲದಲ್ಲೂ ಮಹಿಳೆಯರಿಗೆ ವಿಶೇಷ ಸ್ಥಾನಮಾನ ನೀಡಬೇಕು ಎಂದು ಬಿಜೆಪಿ ರೈತ ಮೋರ್ಚಾ ರಾಜ್ಯಾಧ್ಯಕ್ಷ ಎ.ಎಸ್.ಪಾಟೀಲ್ ನಡಹಳ್ಳಿ ತಿಳಿಸಿದರು.
ಶ್ರೀ ಮಠದ ಆವರಣದಲ್ಲಿ ನೆಟ್ಟಿರುವ ಗಿಡಗಳನ್ನು ಪೋಷಿಸಲಾಗವುದು. ಜತೆಗೆ ಶ್ರೀ ಮಠದಲ್ಲಿ ಗಿಡನೆಟ್ಟ ಉದ್ಯಾನವನಕ್ಕೆ ಮಾಜಿಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅವರ ಹೆಸರು ನಾಮಕರಣ ಮಾಡಲಾಗುವುದು. > ಶ್ರೀ ಪೂರ್ಣಾನಂದಪುರಿ ಸ್ವಾಮೀಜಿ ಶ್ರೀ ೇತ್ರ ತೈಲೇಶ್ವರ ಗಾಣಿಗರ ಮಹಾ ಸಂಸ್ಥಾನ ಮಠ