ಕಾಸಾಯಿಖಾನೆಗೆ ಸಾಗಣೆ ಮಾಡುತ್ತಿದ್ದ ಜಾನುವಾರುಗಳನ್ನು ಗುಂಡ್ಲುಪೇಟೆ ಪೊಲೀಸರು ಕಾರ್ಯಾಚರಣೆ ನಡೆಸಿ ರಕ್ಷಿಸಿರುವುದು.  
ಜಿಲ್ಲೆ

ತಮಿಳುನಾಡಿಗೆ ಸಾಗಿಸುತ್ತಿದ್ದ ಹಸು, ಕರು ರಕ್ಷಣೆ

ಗುಂಡ್ಲುಪೇಟೆ: ಕಸಾಯಿಖಾನೆಗೆ ಸಾಗಣೆ ಮಾಡುತ್ತಿದ್ದ ಹಸು ಮತ್ತು ಕರುವನ್ನು ರಕ್ಷಿಸಿದ ಪಟ್ಟಣ ಪೊಲೀಸರು ತಮಿಳುನಾಡು ಮೂಲದ ಮೂವರು ಆರೋಪಿಗಳನ್ನು ಬಂಧಿಸಿದ್ದಾರೆ.

ಗೂಡಲೂರಿನ ಮುರುಗೇಶ್, ಶಬರೀಶ್ ಹಾಗೂ ಮಂಜುನಾಥ್ ಬಂಧಿತರು. ಹೈವೇ ಪೆಟ್ರೋಲಿಂಗ್ ಸಿಬ್ಬಂದಿ ಸೋಮವಾರ ರಾತ್ರಿ ಜಾನುವಾರುಗಳನ್ನು ಅನುಮಾನಾಸ್ಪದವಾಗಿ ಸಾಗಣೆ ಮಾಡುತ್ತಿದ್ದ ಮೂವರನ್ನು ವಶಕ್ಕೆ ಪಡೆದು ವಿಚಾರಣೆ ನಡೆಸಿದರು. ಮನೆಗಳ ಮುಂದೆ ಕಟ್ಟಿಹಾಕಿದ್ದ ಜೆರ್ಸಿ ಹಸು ಹಾಗೂ ಒಂದು ಕರುವನ್ನು ಕದ್ದು ಸಾಗಣೆ ಮಾಡುತ್ತಿರುವುದಾಗಿ ಆರೋಪಿಗಳು ಒಪ್ಪಿಕೊಂಡರು. ಈ ಬಗ್ಗೆ ಪ್ರಕರಣ ದಾಖಲಿಸಿದ ಪೊಲೀಸರು ಆರೋಪಿಗಳನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿ, ನ್ಯಾಯಾಧೀಶರು ನ್ಯಾಯಾಂಗ ಬಂಧನಕ್ಕೆ ಒಪ್ಪಿಸಿದ್ದಾರೆ. ಜಾನುವಾರುಗಳನ್ನು ಮಾಲೀಕರ ವಶಕ್ಕೆ ನೀಡಲಾಗುವುದು ಎಂದು ಪೊಲೀಸರು ತಿಳಿಸಿದ್ದಾರೆ.