ಸಕಲೇಶಪುರ : ಬಜರಂಗದಳ ಕಾರ್ಯಕರ್ತರ ಮಾಹಿತಿ ಮೇರೆಗೆ ಪೊಲೀಸರು ತಾಲೂಕಿನ ಸುಳ್ಳಕ್ಕಿ ಗ್ರಾಮದಲ್ಲಿ ಅಕ್ರಮವಾಗಿ ಕಸಾಯಿ ಖಾನೆಗೆ ಸಾಗಿಸಲು ಮುಂದಾಗಿದ್ದ ಗೋವುಗಳನ್ನು ಶನಿವಾರ ರಕ್ಷಿಸಿದ್ದಾರೆ.
ತಾಲೂಕಿನ ಗ್ರಾಮಾಂತರ ಠಾಣೆ ವ್ಯಾಪ್ತಿಯ ಸುಳ್ಳಕ್ಕಿ ಗ್ರಾಮದಲ್ಲಿ ಅಕ್ರಮವಾಗಿ ಗೋವುಗಳನ್ನು ಸಾಗಾಟ ಮಾಡಲು ತಯಾರಿ ನಡೆಸುತ್ತಿದ್ದಾರೆ ಎಂಬ ಖಚಿತ ಮಾಹಿತಿ ದೊರೆತಿದೆ. ಈ ಆಧಾರದ ಮೇಲೆ ಕಾರ್ಯಪ್ರವೃತ್ತರಾದ ಪೋಲಿಸರು ಸುಳ್ಳಕ್ಕಿಯಿಂದ ಬ್ಯಾಕರವಳ್ಳಿ ಸಂಪರ್ಕಿಸುವ ರಸ್ತೆಯಲ್ಲಿ ಎರಡು ಹೋರಿಗಳು, ಒಂದು ಹಸುವನ್ನು ತುಂಬಿ ಕಳುಹಿಸಲು ಯತ್ನಿಸುತ್ತಿದ್ದಾಗ ಕಾರ್ಯಾಚರಣೆ ನಡೆಸಿದ್ದಾರೆ.
ಪೊಲೀಸರು ಬರುತ್ತಿದ್ದಂತೆ ಆರೋಪಿಗಳು ಪರಾರಿಯಾಗಿದ್ದಾರೆ. ಹಸುಗಳನ್ನು ವಶಪಡಿಸಿಕೊಂಡು, ಗೋಶಾಲೆಗೆ ಬಿಡಲಾಗಿದೆ. ಇಬ್ಬರ ಮೇಲೆ ದೂರು ದಾಖಾಲಾಗಿದ್ದು, ಕಾರ್ಯಾಚರಣೆಯಲ್ಲಿ ಸಬ್‌ಇನ್ಸ್‌ಪೆಕ್ಟರ್ ತಿಪ್ಪಾರೆಡ್ಡಿ, ಸಿಬ್ಬಂದಿ ಇದ್ದರು.