ಜಿಲ್ಲೆ

ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹ

ಎ. ಆರ್. ರಘುರಾಮ

ಕೊಳ್ಳೇಗಾಲ : ವಿವಿಧ ಬೇಡಿಕೆ ಈಡೇರಿಸುವಂತೆ ಆಗ್ರಹಿಸಿದ ಪಟ್ಟಣದಲ್ಲಿ ಬುಧವಾರ ಕರ್ನಾಟಕ ರಾಜ್ಯ ಅಂಗನವಾಡಿ ನೌಕರರ ಸಂಘದ ತಾಲೂಕು ಸಮಿತಿಯಿಂದ (ಸಿಐಟಿಯು) ಪ್ರತಿಭಟನೆ ನಡೆಸಲಾಯಿತು.

ಮುರಡಿಗುಡ್ಡದ ಮುಂಭಾಗ ಜಮಾಯಿಸಿದ್ದ ಸಿಐಟಿಯು ಸಂಘಟನೆಯ ಪದಾಧಿಕಾರಿಗಳು ಹಾಗೂ ಸದಸ್ಯರು ಘೋಷಣೆ ಮೂಲಕ ಪ್ರಮುಖ ರಸ್ತೆಗಳಲ್ಲಿ ತೆರಳಿ ಪ್ರತಿಭಟಿಸಿದರು. ಬಳಿಕ ತಾಲೂಕು ಕಚೇರಿಗೆ ತೆರಳಿ ಗ್ರೇಡ್ 2 ತಹಶಿಲ್ದಾರ್ ಬಿ.ವಿ.ಕುಮಾರ್‌ಗೆ ಮನವಿ ಸಲ್ಲಿಸಿದರು.

ಅಂಗನವಾಡಿ ನೌಕರರು 50 ವರ್ಷಗಳಿಂದ ಐಸಿಡಿಎಸ್ ಅಡಿಯಲ್ಲಿ ದುಡಿಯುತ್ತಿದ್ದಾರೆ. ಸಾಮಾಜಿಕ ನ್ಯಾಯದ ಹಿನ್ನೆಲೆಯಲ್ಲಿಈ ಯೋಜನೆಯನ್ನು ಕಾಯಂ ಮಾಡ ಬೇಕು. ಕಾಯಂ ಮಾಡುವ ತನಕ ಕನಿಷ್ಠ ವೇತನ ನೀಡಬೇಕು. ಫಲಾನುಭವಿಗಳ ಘಟಕ ವೆಚ್ಚ ಹೆಚ್ಚಳ ಮಾಡಬೇಕು. ಅಂಗನವಾಡಿಯಲ್ಲಿ ಎಲ್‌ಕೆಜಿ ವಿಭಾಗ ತೆರೆಯ ಬೇಕು. ಎಲ್ಲ ಮೂಲ ಸೌಕರ್ಯವನ್ನು ನೀಡಬೇಕೆಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಸಿಐಟಿಯು ತಾಲೂಕು ಸಂಘಟನೆಯ ಅಧ್ಯಕ್ಷೆ ಉಮಾದೇವಿ, ಉಪಾಧ್ಯಕ್ಷೆ ಮರಿಯಮ್ಮ ಕಾರ್ಯದರ್ಶಿ ಶಾಂತಮ್ಮ, ಸಹ ಕಾರ್ಯದರ್ಶಿ ಜಿ. ಶೋಭ, ಸವಿತ, ನಳಿನಿ, ವಿಜಯ, ಸುನೀತ, ಜಯಮ್ಮ, ಲತಾ ಮತ್ತಿತರಿದ್ದರು.