ಜಿಲ್ಲೆ

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಅಪಮಾನ ಖಂಡಿಸಿ ಪ್ರತಿಭಟನೆ

ಸುನಿಲ್ ಪೊನ್ನೇಟಿ

ಕುಶಾಲನಗರ:

ಸುಪ್ರೀಂಕೋರ್ಟ್ ಮುಖ್ಯ ನ್ಯಾಯಾಧೀಶರಿಗೆ ಅಪಮಾನಿಸಿದ ಘಟನೆ ಖಂಡಿಸಿ ವಿಶ್ವಜ್ಞಾನಿ ಅಂಬೇಡ್ಕರ್ ಟ್ರಸ್ಟ್ ವತಿಯಿಂದ ಕುಶಾಲನಗರದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಕುಶಾಲನಗರದ ಐಬಿ ಬಳಿಯಿಂದ ಮೆರವಣಿಗೆ ಮೂಲಕ ಆಗಮಿಸಿದ ಪ್ರತಿಭಟನಾಕಾರರು ಕಾರ್ಯಪ್ಪ ವೃತ್ತದಲ್ಲಿ ಮಾನವ ಸರಪಳಿ ನಿರ್ಮಿಸಿ ಆಕ್ರೋಶ ವ್ಯಕ್ತಪಡಿಸಿದರು. ನ್ಯಾಯಾಧೀಶರನ್ನು ಅಪಮಾನಿಸಿದ ವ್ಯಕ್ತಿಯನ್ನು ದೇಶದಿಂದಲೇ ಗಡಿಪಾರು ಮಾಡುವಂತೆ ಒತ್ತಾಯಿಸಿದ ಅವರು, ಕೇಂದ್ರ ಸರ್ಕಾರಕ್ಕೆ ಈ ಸಂಬAಧ ಎಚ್ಚರಿಕೆ ನೀಡಿದರು.

ನಂತರ ಕುಶಾಲನಗರ ತಾಲೂಕು ಕಚೇರಿಯತ್ತ ಸಾಗಿದ ಪ್ರತಿಭಟನಾಕಾರರು ತಹಸೀಲ್ದಾರ್ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ಸಲ್ಲಿಸಿದರು.

ಈ ಸಂದರ್ಭ ಮಾತನಾಡಿದ ದಲಿತ ಮುಖಂಡ ಮೋಹನ್ ಮೌರ್ಯ, ದೇಶದಲ್ಲಿ ನ್ಯಾಯಾಧೀಶರಿಗೆ ಅಪಮಾನ ಮಾಡಿರುವುದು ಅತ್ಯಂತ ಖಂಡನೀಯ. ಕೂಡಲೇ ಕೃತ್ಯವೆಸಗಿದಾತನನ್ನು ಗಡಿಪಾರು ಮಾಡಬೇಕು ಎಂದು ಒತ್ತಾಯಿಸಿದರು.

ಟ್ರಸ್ಟ್ ಅಧ್ಯಕ್ಷ ಲೋಕೇಶ್ ಮಾತನಾಡಿ, ಮುಖ್ಯನಾಯಾಧೀಶರಿಗೆ ಅಪಮಾನ ಎಸಗಿರುವುದರ ವಿರುದ್ಧ ಪ್ರತಿಯೊಬ್ಬ ಭಾರತೀಯನೂ ಖಂಡಿಸಬೇಕು. ಇದು ಎಲ್ಲಾ ಭಾರತೀಯರಿಗೂ ಮಾಡಿರುವ ಅಪಮಾನ ಎಂದರು.

ಈ ಸಂದರ್ಭ ಟ್ರಸ್ಟ್ ಕಾರ್ಯದರ್ಶಿ ಸತೀಶ್ ಕುಮಾರ್, ಖಜಾಂಜಿ ಜ್ಞಾನವಾಣಿ ಸತೀಶ್, ನಿರ್ದೇಶಕರಾದ ಜಯವರ್ಧನ್(ಕೇಶವ್), ಪ್ರಮುಖರಾದ ಸುರೇಶ್, ವೀರಭದ್ರ, ಶಿವಪ್ಪ, ಮಹೇಶ್, ರವಿ, ಮಂಜುನಾಥ್, ಅಣ್ಣಯ್ಯ, ಕೃಷ್ಟ, ಗೋವಿಂದರಾಜ್ ಮತ್ತಿತರರು ಇದ್ದರು.