ಜಿಲ್ಲೆ

ಕನ್ನಡ ಕಾರ್ಯಕರ್ತರ ಬಂಧನ

ಡಿ.ವಿ. ಕಮ್ಮಾರ

ಬೆಳಗಾವಿ: ಅನುಮತಿ ಇಲ್ಲದೇ ಕರಾಳ ದಿನ ರ‌್ಯಾಲಿ ಮಾಡಿರುವ ಎಂಇಎಸ್ ವಿರುದ್ಧ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ನಗರದಲ್ಲಿ ಸೋಮವಾರ ಪ್ರತಿಭಟಿಸಿದ ಯುವ ಕರ್ನಾಟಕ ವೇದಿಕೆಯ 20ಕ್ಕೂ ಹೆಚ್ಚು ಕಾರ್ಯಕರ್ತರನ್ನು ಪೊಲೀಸರು ವಶಕ್ಕೆ ಪಡೆದರು.

ನಗರದ ಚನ್ನಮ್ಮ ವೃತ್ತದಲ್ಲಿ ಪ್ರತಿಭಟಿಸಿದ ಕಾರ್ಯಕರ್ತರು, ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ರ‌್ಯಾಲಿಯಲ್ಲಿ ತೆರಳಿ ಎಂಇಎಸ್ ವಿರುದ್ಧ ಘೋಷಣೆ ಕೂಗಿ ಆಕ್ರೋಶ ವ್ಯಕ್ತಪಡಿಸಿದರು.

ರೌಡಿಶೀಟರ್ ಆಗಿರುವ ಎಂಇಎಸ್‌ನ ಶುಭಂ ಶಳಕೆ ಜತೆಗೆ ಮಾಳಮಾರುತಿ ಠಾಣೆ ಇನ್‌ಸ್ಪೆಕ್ಟರ್ ಜೆ.ಎಂ.ಕಾಲಿಮಿರ್ಚಿ ಸೆಲ್ಫಿ ಕ್ಲಿಕ್ಕಿಸಿಕೊಂಡಿದ್ದು ತಪ್ಪು. ಈ ಬಗ್ಗೆ ತನಿಖೆ ಕೈಗೊಳ್ಳಬೇಕು. ನಿಯಮ ಉಲ್ಲಂಘಿಸಿರುವ ಎಂಇಎಸ್ ಮುಖಂಡರ ವಿರುದ್ಧವೂ ಕಠಿಣ ಕ್ರಮವಾಗಬೇಕು ಎಂದು ಆಗ್ರಹಿಸಿ ಪ್ರತಿಭಟಿಸಿದರು.

ಪೊಲೀಸ್ ಮನವೋಲಿಕೆ ಬಳಿಕವೂ ಪ್ರತಿಭಟನೆ ಕೈಬಿಡದ ಹಿನ್ನೆಲೆ ವಶಕ್ಕೆ ಪಡೆದು, ನಂತರ ಬಿಡುಗಡೆಗೊಳಿಸಿದರು.