ಮಡಿಕೇರಿ:
ಕಟ್ಟಡ ಕಾರ್ಮಿಕರ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ರಾಜ್ಯ ಕಟ್ಟಡ ಮತ್ತು ಇತರೆ ನಿರ್ಮಾಣ ಕಾರ್ಮಿಕರ ಫೆಡರೇಷನ್ ವತಿಯಿಂದ ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಸೋಮವಾರ ಪ್ರತಿಭಟನೆ ನಡೆಸಲಾಯಿತು.
ಸರಕಾರ ಹಾಗೂ ಕಾರ್ಮಿಕ ಇಲಾಖೆಯ ವಿರುದ್ಧ ಘೋಷಣೆ ಕೂಗಿ ಪ್ರತಿಭಟನಾನಿರತರು ಆಕ್ರೋಶ ವ್ಯಕ್ತಪಡಿಸಿದರು. ಕಾರ್ಮಿಕ ಕಲ್ಯಾಣ ಮಂಡಳಿಯ ವತಿಯಿಂದ ಸ್ವೀಕಾರಗೊಳ್ಳುತ್ತಿರುವ ಶೈಕ್ಷಣಿಕ ಸಹಾಯಧನ ಅರ್ಜಿಯಲ್ಲಿ ಕೆಲವು ಲೋಪದೋಷಗಳಿವೆ. ಇದರಿಂದ ತಂತ್ರಾಂಶದಲ್ಲಿ ಕೆಲ ಬದಲಾವಣೆ ಮಾಡಬೇಕು, ಬಾಕಿ ಇರುವ ಶೈಕ್ಷಣಿಕ ಅರ್ಜಿಗಳಿಗೆ ತ್ವರಿತವಾಗಿ ಹಣ ವರ್ಗಾವಣೆ ಮಾಡಬೇಕು, ಆರೋಗ್ಯ ಸಂಜೀವಿನಿ ಜಾರಿಗೊಳಿಸಬೇಕು, ಕಾರ್ಮಿಕ ಅರ್ಜಿ ಸಲ್ಲಿಕೆಗೆ ಇರುವ ನೂತನ ತಂತ್ರಾಂಶದ ಕುರಿತು ತರಬೇತಿ ನೀಡಬೇಕು, ಕಾರ್ಮಿಕರ ಕಲ್ಯಾಣ ಮಂಡಳಿಯಿಂದ ಆರಂಭಗೊಳಿಸಲು ಉದ್ದೇಶಿಸಿರುವ ಶಿಶು ವಿಹಾರಗಳನ್ನು ರದ್ದುಗೊಳಿಸಬೇಕು, ಕಾರ್ಮಿಕರಿಗೆ ನೀರುವ ರೇಷನ್, ಟೂಲ್, ಸುರಕ್ಷಾ ಕಿಟ್ ಖರೀದಿಯಲ್ಲಿ ಪಾರದರ್ಶಕತೆ ಕಾಪಾಡಿಕೊಂಡು ಅರ್ಹ ಫಲಾನುಭವಿಗಳು ಇದು ತಲುಪುವಂತೆ ನೋಡಿಕೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು.
ಪ್ರತಿಭಟನೆಯಲ್ಲಿ ಸಂಘದ ಜಿಲ್ಲಾಧ್ಯಕ್ಷ ಎ.ಸಿ. ಸಾಬ, ಕಾರ್ಯದರ್ಶಿ ರತೀಶ್ ಕುಮಾರ್, ಖಜಾಂಜಿ ಹಮೀದ್, ಸಹಕಾರ್ಯದರ್ಶಿಗಳಾದ ಎಸ್. ರೂಪ, ಕೆ.ಕೆ. ಹರಿದಾಸ್ ಸೇರಿದಂತೆ ಇನ್ನಿತರರು ಹಾಜರಿದ್ದರು.