ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶವನ್ನು ಖಂಡಿಸಿ ರಾಜ್ಯ ರೈತ ಸಂಘದ ಹನೂರು ಮತ್ತು ಕೊಳ್ಳೇಗಾಲ ತಾಲೂಕುಗಳ ಪದಾಧಿಕಾರಿಗಳು ಪಟ್ಟಣದ ಮುಡಿಗುಂಡದ ಸೇತುವೆ ಬಳಿ ರಾೀಯ ಹೆದ್ದಾರಿ(209) ತಡೆದು ಪ್ರತಿಭಟನೆ ನಡೆಸಿದರು. 
ಜಿಲ್ಲೆ

ರೈತ ಸಂಘದಿಂದ ವಾಹನ ಸಂಚಾರ ತಡೆ

ನಾಗೇಶ ಎಸ್

ಕೊಳ್ಳೇಗಾಲ: ತಮಿಳುನಾಡಿಗೆ ಕಾವೇರಿ ನೀರು ಹರಿಸುವಂತೆ ಸುಪ್ರೀಂಕೋರ್ಟ್ ನೀಡಿರುವ ಆದೇಶ ಖಂಡಿಸಿ ರಾಜ್ಯ ರೈತ ಸಂಘದ ಹನೂರು ಮತ್ತು ಕೊಳ್ಳೇಗಾಲ ತಾಲೂಕು ಕಾರ್ಯಕರ್ತರು ಶನಿವಾರ ಪಟ್ಟಣದ ಮುಡಿಗುಂಡದ ಸೇತುವೆ ಬಳಿ ರಾಷ್ಟ್ರೀಯ ಹೆದ್ದಾರಿ(209) ವಾಹನ ಸಂಚಾರ ತಡೆದು ಪ್ರತಿಭಟನೆ ನಡೆಸಿದರು.

ಈ ವೇಳೆ ರೈತ ಮುಖಂಡರು ತಮಿಳುನಾಡಿಗೆ ಕಾವೇರಿ ನೀರು ಹರಿಸಿರುವ ರಾಜ್ಯ ಸರ್ಕಾರದ ವಿರುದ್ಧ ರೈತರು ಘೋಷಣೆಗಳನ್ನು ಕೂಗಿ ಆಕ್ರೋಶ ವ್ಯಕ್ತಪಡಿಸಿದರು. ರೈತ ಮುಖಂಡ ಗೌಡೇಗೌಡ ಮಾತನಾಡಿ, ಕುಡಿಯಲು ಹಾಗೂ ರೈತರ ಬೆಳೆಗಳಿಗೆ ನೀರಿಲ್ಲದಿದ್ದರೂ ಸುಪ್ರೀಂಕೋರ್ಟ್ ಆದೇಶ ಪಾಲಿಸಬೇಕೆಂಬ ಕಾರಣಕ್ಕೆ ರಾಜ್ಯ ಸರ್ಕಾರ ತಮಿಳುನಾಡಿಗೆ ನೀರು ಬಿಟ್ಟಿರುವುದು ಖಂಡನಾರ್ಹ. ಕಾವೇರಿ ನೀರಿನ ಮಟ್ಟ ಎಷ್ಟಿದೆ ಎಂಬ ವಾಸ್ತವಾಂಶ ಸುಪ್ರೀಂಕೋರ್ಟ್‌ಗೆ ಮನವರಿಕೆ ಮಾಡುವಲ್ಲಿ ರಾಜ್ಯ ಸರ್ಕಾರ ವಿಫಲವಾಗಿದೆ. ನಮ್ಮ ಬೆಳೆಗಳು ಒಣಗುತ್ತಿವೆ. ಇದರಿಂದ ನಮಗೆ ಅನ್ಯಾಯವಾಗಿದೆ. ಕುಡಿಯುವ ನೀರಿಗಾಗಿ ಸಾರ್ವಜನಿಕರು ಸಹ ಬೀದಿಗಿಳಿದು ಪ್ರತಿಭಟಿಸಬೇಕು ಎಂದರು.

ಅಧಿಕಾರ ಯಾರಿಗೂ ಶಾಶ್ವತವಲ್ಲ. ಮುಂದಿನ ದಿನಗಳಲ್ಲಿ ರೈತರು ಪಾಠ ಕಲಿಸಲಿದ್ದಾರೆ ಎಂದು ರಾಜ್ಯ ಸರ್ಕಾರದ ವಿರುದ್ಧ ಕಿಡಿಕಾರಿದರು. ಅಲ್ಲದೇ ಸುಪ್ರೀಂಕೋರ್ಟ್ ತಮ್ಮ ಆದೇಶವನ್ನು ಮರು ಪರಿಶೀಲಿಸಬೇಕು ಎಂದು ಒತ್ತಾಯಿಸಿದರು.

ರೈತರು ಹೆದ್ದಾರಿ ತಡೆದ ಹಿನ್ನೆಲೆಯಲ್ಲಿ ಸುಮಾರು ಒಂದು ಕಿ.ಮೀ. ವರೆಗೂ ವಾಹನಗಳು ನಿಂತು ಸಂಚಾರದಲ್ಲಿ ಅಡಚಣೆಯಾಯಿತು. ಇದ್ದರಿಂದ ಎಚ್ಚೆತ್ತ ಪೊಲೀಸರು ಪ್ರತಿಭಟನಾನಿರತ ರೈತರನ್ನು ವಶಕ್ಕೆ ಸಂಚಾರಕ್ಕೆ ಅನುವು ಮಾಡಿಕೊಟ್ಟರು.

ಪ್ರತಿಭಟನೆಯಲ್ಲಿ ಜಿಲ್ಲಾ ರೈತ ಸಂಘದ ಗೌರವಾಧ್ಯಕ್ಷ ಶಿವರಾಮ್, ತಾಲೂಕು ರೈತ ಸಂಘದ ಅಧ್ಯಕ್ಷ ಉಗನಿಯ ಶಿವಮಲ್ಲು, ಹನೂರು ತಾಲೂಕು ಅಧ್ಯಕ್ಷ ಅಂಜದ್ ಖಾನ್, ಯುವ ಘಟಕದ ತಾಲೂಕು ಅಧ್ಯಕ್ಷ ಸೂರ್ಯ, ರೈತ ಮುಖಂಡರಾದ ಶಿವಕುಮಾರ್, ಮಹಾದೇವ, ಶಿವಮೂರ್ತಿ, ಪೆರಿಯ, ನಾಗರಾಜು, ಚಾಲೀಸ್, ಜಾನ್ ಕೆನಡಿ, ಭಾಸ್ಕರ್, ರಾಜಣ್ಣ, ಮಸಣಶೆಟ್ಟಿ, ಜಪಮಾಲೆ ಇದ್ದರು.