ಮಡಿಕೇರಿ:
ಜಿಲ್ಲೆಯ ಹೆಮ್ಮೆಯ ಸೇನಾನಿಗಳಾದ ಫೀ.ಮಾ. ಕೆ.ಎಂ. ಕಾರ್ಯಪ್ಪ ಮತ್ತು ಜ. ತಿಮ್ಮಯ್ಯ ವಿರುದ್ಧ ಸಾಮಾಜಿಕ ಜಾಲತಾಣದಲ್ಲಿ ಅವಹೇಳನಕಾರಿ ಸಂದೇಶ ಹಾಕಿದ್ದ ವಕೀಲ ಕೆ.ಆರ್. ವಿದ್ಯಾಧರ್ ವಿರುದ್ಧ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಜಿಲ್ಲಾ ಘಟಕ ನೇತೃತ್ವದಲ್ಲಿ ಶುಕ್ರವಾರ ಮಡಿಕೇರಿಯಲ್ಲಿ ಪ್ರತಿಭಟನೆ ನಡೆಸಲಾಯಿತು. ವಿದ್ಯಾಧರ್ ವಿರುದ್ಧ ಕಠಿಣ ಕಾನೂನು ಕ್ರಮಕ್ಕೆ ಆಗ್ರಹಿಸಿ ನಡೆದ ಈ ಪ್ರತಿಭಟನೆಯಲ್ಲಿ ವಿವಿಧ ಕೊಡವ ಸಮಾಜ, ಸಂಘ-ಸAಸ್ಥೆಗಳ ಪ್ರಮುಖರು ಪಾಲ್ಗೊಂಡಿದ್ದರು. ಜಿಲ್ಲೆಯ ಬೇರೆ ಬೇರೆ ಭಾಗಗಳಿಂದ ಆಗಮಿಸಿದ್ದ ಪ್ರತಿಭಟನಾಕಾರರು ವಿದ್ಯಾಧರ್ ವಿರುದ್ಧ ಘೋಷಣೆಗಳನ್ನು ಕೂಗಿದರು.
ಫೀ.ಮಾ. ಕಾರ್ಯಪ್ಪ ವೃತ್ತದಲ್ಲಿ ಸೇರಿದ ಪ್ರತಿಭಟನಾಕಾರರು ಕಾರ್ಯಪ್ಪ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಪ್ರತಿಭಟನೆಗೆ ಚಾಲನೆ ನೀಡಿದರು.
ಕಾರ್ಯಪ್ಪ ವೃತ್ತದಿಂದ ಮೆರವಣಿಗೆ ಮೂಲಕ ಜ. ತಿಮ್ಮಯ್ಯ ವೃತ್ತಕ್ಕೆ ಆಗಮಿಸಿ ಅಲ್ಲಿ ಮಾನವ ಸರಪಳಿ ರಚಿಸಿ ಘೋಷಣೆ ಕೂಗಲಾಯಿತು. ವಿದ್ಯಾಧರ್ ವಿರುದ್ಧ ಕಠಿಣ ಕಾನೂನು ಕ್ರಮಕೈಗೊಳ್ಳಬೇಕೆಂದು ಪ್ರತಿಭಟನಾಕಾರರು ಆಗ್ರಹಿಸಿದರು. ಅನಂತರ ಜಿಲ್ಲಾಡಳಿತ ಭವನಕ್ಕೆ ತೆರಳಿ ಅಧಿಕಾರಿಗಳಿಗೆ ಮನವಿ ಪತ್ರ ಸಲ್ಲಿಸಲಾಯಿತು.
ಈ ವೇಳೆ ಮಾತನಾಡಿದ ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ರಾಜ್ಯಾಧ್ಯಕ್ಷ ಡಾ. ಶಿವಣ್ಣ, ಕಾರ್ಯಪ್ಪ ಹಾಗೂ ತಿಮ್ಮಯ್ಯ ಅವರು ಜಾಗತಿಕ ಮಟ್ಟದ ನಾಯಕರಾಗಿದ್ದು, ದೇಶದ ಸುಭದ್ರತೆಗೆ ಅಮೂಲ್ಯ ಕೊಡುಗೆ ನೀಡಿದ್ದಾರೆ. ಇಂಥ ಮಹಾನ್ ನಾಯಕರಿಗೆ ಅಗೌರವ ತೋರುವ ಸಂದೇಶ ಹರಿಬಿಟ್ಟಿರುವ ವ್ಯಕ್ತಿಗೆ ತಕ್ಕ ಶಿಕ್ಷೆಯಾಗಬೇಕು. ಸೈನಿಕರ ವಿರುದ್ಧ ನಾಲಿಗೆ ಹರಿಬಿಡುವವರಿಗೆ ಜನರು ತಕ್ಕಪಾಠ ಕಲಿಸಬೇಕು ಎಂದು ಹೇಳಿದರು.
ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘದ ಜಿಲ್ಲಾಧ್ಯಕ್ಷ ಕೊಟ್ಟುಕತ್ತೀರ ಪಿ ಸೋಮಣ್ಣ ಮಾತನಾಡಿ, ಗಡಿಯಲ್ಲಿ ನಿಂತು ದೇಶ ಕಾಯುವ ಯೋಧರಿಲ್ಲದಿದ್ದರೆ ದೇಶದ ಭದ್ರತೆ ಹಾಳಾಗುತ್ತದೆ. ಪ್ರಾಣ ಮುಡಿಪಾಗಿಟ್ಟು ದೇಶ ರಕ್ಷಣೆ ಹೋರಾಡುವ ಯೋಧರ ಮನೋಬಲ ಕುಗ್ಗಿಸುವ ಹೇಳಿಕೆಯನ್ನು ವಿದ್ಯಾಧರ್ ನೀಡಿದ್ದು, ಇದು ಕ್ಷಮಿಸಲಾರದ ತಪ್ಪಾಗಿದೆ. ಸಮಾಜದ ಶಾಂತಿ ಕದಡುವ ಯತ್ನ ಇದಾಗಿದ್ದು, ಜಾತಿಗಳ ನಡುವೆ ಸಂಘರ್ಷ ಸೃಷ್ಟಿಸುವ ಹುನ್ನಾರವೂ ಇದೆ. ಈ ಕುರಿತು ಸಮಗ್ರ ತನಿಖೆ ಕೈಗೊಂಡು ಆರೋಪಿ ವಿರುದ್ಧ ಕಠಿಣ ಕ್ರಮಕೈಗೊಳ್ಳಬೇಕು. ಇದರ ಹಿನ್ನೆಲೆಯನ್ನು ಪೊಲೀಸ್ ಇಲಾಖೆ ಬೇಧಿಸಬೇಕು ಎಂದರು.
ಕೊಡವ ಸಮಾಜಗಳ ಒಕ್ಕೂಟದ ಅಧ್ಯಕ್ಷ ಕಳ್ಳಿಚಂಡ ವಿಷ್ಣು ಕಾರ್ಯಪ್ಪ ಮಾತನಾಡಿ, ಸಂದೇಶ ಹಾಕುವ ಮೂಲಕ ಶಾಂತಿ ಪ್ರಿಯ ಜಿಲ್ಲೆಯ ಕಾನೂನು ಸುವ್ಯವಸ್ಥೆಯನ್ನು ಹದಗೆಡುವ ಕೆಲಸ ವಿದ್ಯಾಧರ್ ಮಾಡಿದ್ದಾರೆ. ವಕೀಲರ ಸಂಘ ಶಾಶ್ವತವಾಗಿ ವಿದ್ಯಾಧರ್ ಸದಸ್ಯತ್ವ ರದ್ದುಗೊಳಿಸಬೇಕು. ಪೊಲೀಸ್ ಇಲಾಖೆ ಕಠಿಣ ಕ್ರಮಕೈಗೊಂಡು ಗಡಿಪಾರಿಗೆ ಮುಂದಾಗಬೇಕೆAದು ಒತ್ತಾಯಿಸಿದರು.
ಫೀ.ಮಾ. ಕಾರ್ಯಪ್ಪ ಹಾಗೂ ಜ. ತಿಮ್ಮಯ್ಯ ಫೋರಂ ಅಧ್ಯಕ್ಷ ನಿವೃತ್ತ ಕರ್ನಲ್ ಕಂಡ್ರತAಡ ಸುಬ್ಬಯ್ಯ ಮಾತನಾಡಿ, ದೈವ ಸಮಾನ ವಕೀಲ ವೃತ್ತಿಗೆ ವಿದ್ಯಾಧರ್ ಕಳಂಕ ತಂದಿದ್ದಾರೆ. ಮಹಾನ್ ಸೇನಾನಿಗಳನ್ನು ಅಪಮಾನಗೈದಿರುವುದು ದೇಶದ್ರೋಹವಾಗಿದ್ದು, ಕೂಡಲೇ ಆತನನ್ನು ಬಂಧಿಸಿ ಗರಿಷ್ಠ ಪ್ರಮಾಣದ ಶಿಕ್ಷೆ ವಿಧಿಸಬೇಕೆಂದು ಹೇಳಿದರು.
ಕರ್ನಾಟಕ ಕೊಡವ ಸಾಹಿತ್ಯ ಅಕಾಡೆಮಿ ಅಧ್ಯಕ್ಷ ಅಜ್ಜಿನಿಕಂಡ ಮಹೇಶ್ ನಾಚಯ್ಯ ಮಾತನಾಡಿ, ಹಲವು ವರ್ಷಗಳಿಂದ ಜಿಲ್ಲೆಯಲ್ಲಿ ಕೊಡವ ಜನಾಂಗದ ವಿರುದ್ಧ ತೆರೆಮರೆಯಲ್ಲಿ ಪಿತೂರಿ ನಡೆಯುತ್ತಲಿದ್ದು, ಪರಸ್ಪರ ಅನ್ಯೋನ್ಯವಾಗಿರುವ ಜಿಲ್ಲೆಯ ಜನರನ್ನು ಕೆರಳಿಸುವ ಕೆಲಸವನ್ನು ವಿದ್ಯಾಧರ್ ಮಾಡಿದ್ದಾರೆ. ಸರ್ಕಾರ ಸೂಕ್ತ ಕ್ರಮಕೈಗೊಳ್ಳದಿದ್ದಲ್ಲಿ ಜನರು ಕಾನೂನು ಕೈಗೆತ್ತಿಕೊಳ್ಳಬೇಕಾಗುತ್ತದೆ ಎಂದರು.
ಸೋಮವಾರಪೇಟೆ ಕೊಡವ ಸಮಾಜದ ಅಧ್ಯಕ್ಷ ಮಾಳೇಟಿರ ಅಭಿಮನ್ಯು ಕುಮಾರ್, ಜಿಲ್ಲಾ ಬಿಜೆಪಿ ಅಧ್ಯಕ್ಷ ನಾಪಂಡ ರವಿಕಾಳಪ್ಪ, ಕೊಡವ ನ್ಯಾಷನಲ್ ಕೌನ್ಸಿಲ್ ಅಧ್ಯಕ್ಷ ನಂದಿನೆರವAಡ ನಾಚಪ್ಪ, ಅಖಿಲ ಕೊಡವ ಸಮಾಜ ಅಧ್ಯಕ್ಷ ಪರದಂಡ ಸುಬ್ರಮಣಿ, ಸಾಮಾಜಿಕ ಕಾರ್ಯಕರ್ತ ಪ್ರವೀಣ್ ಸಿದ್ದಾಪುರ,
ಬಿಜೆಪಿ ಮಾಜಿ ಜಿಲ್ಲಾಧ್ಯಕ್ಷ ಪಳೆಯಂಡ ರಾಬಿನ್ ದೇವಯ್ಯ, ನಾಪೋಕ್ಲು ಕೊಡವ ಸಮಾಜ ಅಧ್ಯಕ್ಷ ಮುಂಡAಡ ಸಿ. ನಾಣಯ್ಯ ಮಾತನಾಡಿದರು.
ಮಡಿಕೇರಿ ಕೊಡವ ಸಮಾಜ ಅಧ್ಯಕ್ಷ ಮುಡಂಡ ಮುತ್ತಪ್ಪ, ಪೊನ್ನಂಪೇಟೆ ಕೊಡವ ಸಮಾಜ ಅಧ್ಯಕ್ಷ ಕಾಳಿಮಾಡ ಮೋಟಯ್ಯ, ಕುಶಾಲನಗರ ಕೊಡವ ಸಮಾಜ ಅಧ್ಯಕ್ಷ ವಾಂಚೀರ ಮನು ನಂಜುAಡ, ಚೆಟ್ಟಳ್ಳಿ ಕೊಡವ ಸಮಾಜ ಅಧ್ಯಕ್ಷ ಮುಳ್ಳಂಡ ರತ್ತು ಚಂಗಪ್ಪ, ಮಡಿಕೇರಿ ಕೊಡವ ಸಮಾಜ ಪೊಮ್ಮಕಡ ಕೂಟ ಅಧ್ಯಕ್ಷೆ ಬೊಳ್ಳಂಡ ಕವಿತಾ, ಪೊನ್ನಂಪೇಟೆ ತಾಲೂಕು ಮಾಜಿ ಸೈನಿಕರ ಸಂಘದ ಅಧ್ಯಕ್ಷ ಐನಂಡ ಕೆ. ಮಂದಣ್ಣ, ಅರೆಸೇನಾ ಪಡೆ ಯೋಧರ ಸಂಘದ ಅಧ್ಯಕ್ಷ ಪುಲಿಯಂಡ ಚಂಗಪ್ಪ, ಚೇರಂಬಾಣೆ ಮಾಜಿ ಸೈನಿಕರ ಕಲ್ಯಾಣ ಸಂಘದ ಅಧ್ಯಕ್ಷ ಅಯ್ಯಂಡ ಅಯ್ಯಪ್ಪ, ಮಾಜಿ ಸೈನಿಕರ ಸಂಘದ ಮೈಸೂರು ಜಿಲ್ಲಾಧ್ಯಕ್ಷ ಕೆ.ಪಿ. ದಿವಾಕರ್, ಹಿಂದೂ ಜಾಗರಣಾ ವೇದಿಕೆ ಅಧ್ಯಕ್ಷ ಕುಕ್ಕೇರ ಅಜಿತ್, ರೋಮನ್ ಕ್ಯಾಥೊಲಿಕ್ ಅಸೋಸಿಯೇಷÀನ್ ಅಧ್ಯಕ್ಷ ಜಾನ್ಸನ್ ಪಿಂಟೋ, ಬಿಜೆಪಿ ಮಹಿಳಾ ಮೋರ್ಚಾ ಜಿಲ್ಲಾಧ್ಯಕ್ಷೆ ನೆರವಂಡ ಅನಿತಾ ಪೂವಯ್ಯ, ಕೊಡವ ಮಕ್ಕಡ ಕೂಟದ ಅಧ್ಯಕ್ಷ ಬೊಳ್ಳಜಿರ ಅಯ್ಯಪ್ಪ, ಅಖಿಲ ಕರ್ನಾಟಕ ಮಾಜಿ ಸೈನಿಕರ ಸಂಘ ಕೊಡಗು ಜಿಲ್ಲಾ ಘಟಕದ ಉಪಾಧ್ಯಕ್ಷ ಸುಧೀರ್, ಕಾರ್ಯದರ್ಶಿ ಸಿ.ಜಿ. ತಿಮ್ಮಯ್ಯ, ಖಜಾಂಜಿ ಕಾರ್ಯಪ್ಪ ಸೇರಿದಂತೆ ವಿವಿಧ ಸಂಘ-ಸAಸ್ಥೆಗಳ ಪ್ರಮುಖರು ಇದ್ದರು.