ಜಿಲ್ಲೆ

ಮಣಿಪುರ ಹಿಂಚಾರ ಖಂಡಿಸಿ ಪ್ರತಿಭಟನೆ

ಅವಿನಾಶ್ ಜೈನಹಳ್ಳಿ

ಮಣಿಪುರದಲ್ಲಿ ನಡೆದಿರುವ ಮಹಿಳೆಯರ ಮೇಲಿನ ಅತ್ಯಾಚಾರ ಮತ್ತು ಬೆತ್ತಲೆ ಮೆರವಣಿಗೆ ಖಂಡಿಸಿ ಮೈಸೂರು ವಿಶ್ವವಿದ್ಯಾಲಯ ದಲಿತ ವಿದ್ಯಾರ್ಥಿ ಒಕ್ಕೂಟ ಮತ್ತು ಸಂಶೋಧಕರ ಸಂಘದಿಂದ ಮಾನವ ಸರಪಳಿ ರಚಿಸಿ ಪ್ರತಿಭಟನೆ ನಡೆಸಲಾಯಿತು.

ಮಾನಸಗಂಗೋತ್ರಿಯ ದೊಡ್ಡ ಗಡಿಯಾರದ ಬಳಿ ಶುಕ್ರವಾರ ಜಮಾವಣೆಗೊಂಡ ವಿದ್ಯಾರ್ಥಿಗಳು, ಮಣಿಪುರವನ್ನು ರಾಷ್ಟ್ರಪತಿ ಆಡಳಿತಕ್ಕೆ ಒಳಪಡಿಸಿ ಶಾಂತಿ ನೆಲೆಸುವಂತೆ ಕ್ರಮವಹಿಸಬೇಕೆಂದು ಆಗ್ರಹಿಸಿದರು.

ದೇಶದ ಮಹಿಳೆಯರು ಮತ್ತು ಆದಿವಾಸಿಗಳಿಗೆ ರಕ್ಷಣೆ ಇಲ್ಲದಂತಾಗಿದೆ. ದೇಶದ ಪ್ರಧಾನಿ ಇಂತಹ ಘಟನೆಗಳನ್ನು ಗಂಭೀರವಾಗಿ ಪರಿಗಣಿಸಬೇಕು. ಆದಿವಾಸಿ ಮಹಿಳೆಯರ ಮೇಲಾಗುತ್ತಿರುವ ಶೋಷಣೆಯನ್ನು ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಪರಿಗಣಿಸಿ ಮಣಿಪುರವನ್ನು ರಾಷ್ಟ್ರಪತಿ ಆಡಳಿತಕ್ಕೆ ಒಳಪಡಿಸಿ ಶಾಂತಿ ನೆಲೆಸುವಂತೆ ಕ್ರಮವಹಿಸಬೇಕು ಎಂದು ಆಗ್ರಹಿಸಿದರು.

ಸಂಶೋಧಕರ ಸಂಘದ ಅಧ್ಯಕ್ಷ ಸಿ.ಮಹೇಶ್, ದಲಿತ ವಿದ್ಯಾರ್ಥಿ ಒಕ್ಕೂಟದ ಅಧ್ಯಕ್ಷ ಪರಂಜ್ಯೋತಿ, ಸಂಶೋಧಕರ ಸಂಘದ ಮಾಜಿ ಅಧ್ಯಕ್ಷ ನಟರಾಜ್ ಶಿವಣ್ಣ, ಮಹೇಶ್ ಸೋಸಲೆ, ಕಲ್ಲಳ್ಳಿ ಕುಮಾರ್, ಪ್ರದೀಪ್ ಮುಮ್ಮಡಿ, ಲಿಂಗರಾಜು, ರಂಗಸ್ವಾಮಿ, ಶಿವಮೂರ್ತಿ, ಸಚಿನ್, ಅರುಣ್, ಶಿವಶಂಕರ್ ,ಪ್ರವೀಣ್, ಕಿರಣ್, ಮಂಜುನಾಥ್ ಶರ್ಮ, ಅರುಣ್, ಪ್ರಸನ್ನ ಸೇರಿದಂತೆ ಹಲವರು ಭಾಗವಹಿಸಿದ್ದರು.