ಕಡಬ: ರಾಜ್ಯ ಸರ್ಕಾರ ಹಾಲಿನ ದರ ಏರಿಸಿರುವುದನ್ನು ಖಂಡಿಸಿ ಬಿಜೆಪಿ ಸುಳ್ಯ ಮಂಡಲ ಮಹಿಳಾ ಮೋರ್ಚಾದ ವತಿಯಿಂದ ಕಡಬ ತಹಸೀಲ್ದಾರ್ ಕಚೇರಿ ಮುಂಭಾಗ ಮಂಗಳವಾರ ಪ್ರತಿಭಟನೆ ನಡೆಯಿತು.
ಶಾಸಕಿ ಭಾಗೀರಥಿ ಮುರುಳ್ಯ ಮಾತನಾಡಿ, ಉಚಿತ ಗ್ಯಾರಂಟಿಗಳ ಪೋಷಣೆಗಾಗಿ ರಾಜ್ಯ ಸರ್ಕಾರ ಅಗತ್ಯ ವಸ್ತುಗಳಿಗೆ ಬೆಲೆ ಹೆಚ್ಚಿಸುತ್ತಿದೆ. ತಕ್ಷಣವೇ ಅಗತ್ಯ ವಸ್ತುಗಳ ಬೆಲೆ ಇಳಿಸದಿದ್ದರೆ ಉಗ್ರ ಹೋರಾಟ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಸಿದರು.
ಸುಳ್ಯ ಮಂಡಲ ಬಿಜೆಪಿ ಮಹಿಳಾ ಮೋರ್ಚಾದ ಅಧ್ಯಕ್ಷೆ ಇಂದಿರಾ ಬಿ.ಕೆ. ಮಾತನಾಡಿದರು. ರಾಜ್ಯ ಬಿಜೆಪಿ ಕಾರ್ಯಕಾರಿಣಿ ಸದಸ್ಯ ಕೃಷ್ಣ ಶೆಟ್ಟಿ, ಜಿ.ಪಂ ಮಾಜಿ ಅಧ್ಯಕ್ಷೆ ಆಶಾ ತಿಮ್ಮಪ್ಪ, ಬಿಜೆಪಿ ಯುವ ಮೋರ್ಚಾದ ಜಿಲ್ಲಾ ಕಾರ್ಯದರ್ಶಿ ಶ್ರೀಕೃಷ್ಣ ಎಂ.ಆರ್, ಎಸ್‌ಸಿ ಮೋರ್ಚಾದ ಮಂಡಲ ಅಧ್ಯಕ್ಷ ಅಣ್ಣಿ ಎಲ್ತಿಮಾರ್, ಪಿ.ಎಲ್.ಡಿ ಬ್ಯಾಂಕ್ ಅಧ್ಯಕ್ಷ ಭಾಸ್ಕರ ಗೌಡ, ಮಹಿಳಾ ಪದಾಧಿಕಾರಿಗಳು ಭಾಗವಹಿಸಿದ್ದರು. ಶಶಿಕಲಾ ಸ್ವಾಗತಿಸಿದರು. ಆಶಾ ರೈ ವಂದಿಸಿದರು. ಕಡಬ ಉಪತಹಸೀಲ್ದಾರ್ ಗೋಪಾಲ್ ಮೂಲಕ ಬಿಜೆಪಿಯು ರಾಜ್ಯ ಸರ್ಕಾರಕ್ಕೆ ಮನವಿ ಸಲ್ಲಿಸಿತು.