ಬೆಳಗಾವಿ: ಬೆಂಗಳೂರಿನಲ್ಲಿ ವಿದ್ಯಾರ್ಥಿನಿ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಖಂಡಿಸಿ ಆಲ್ ಇಂಡಿಯಾ ಡೆಮಾಕ್ರೆಟಿಕ್ ಸ್ಟೂಡೆಂಟ್ಸ್ ಆರ್ಗನೈಜೇಶನ್ ನೇತೃತ್ವದಲ್ಲಿ ನಗರದಲ್ಲಿ ವಿದ್ಯಾರ್ಥಿನಿಯರು ಬುಧವಾರ ಪ್ರತಿಭಟನೆ ನಡೆಸಿದರು.
ನಗರದ ಚನ್ನಮ್ಮ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾಕಾರರು ಘಟನೆಗೆ ಸಂಬಂಧಿಸಿದಂತೆ ಆಕ್ರೋಶ ವ್ಯಕ್ತಪಡಿಸಿದರು. ವಿದ್ಯಾರ್ಥಿನಿ ಮೇಲೆ ಇಬ್ಬರು ಉಪನ್ಯಾಸಕರು ಹಾಗೂ ಓರ್ವ ಸ್ನೇಹಿತ ಲೈಂಗಿಕ ದೌರ್ಜನ್ಯ ಎಸಗಿ ಬ್ಲಾೃಕ್‌ಮೇಲ್ ಮಾಡಿ ಬೆದರಿಕೆ ಹಾಕಿದ್ದಾರೆ. ಮೂವರಿಗೆ ಕಠಿಣ ಶಿಕ್ಷೆ ನೀಡಿ ಮುಂದೆ ಈ ರೀತಿಯ ಘಟನೆಗಳು ನಡೆಯದಂತೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು. ಎಐಡಿಎಸ್‌ಒನ ಜಿಲ್ಲಾ ಸಂಚಾಲಕ ಮಹಾಂತೇಶ ಬೀಳೂರ ಹಾಗೂ ವಿದ್ಯಾರ್ಥಿನಿಯರು ಭಾಗವಹಿಸಿದ್ದರು.