ಜಿಲ್ಲೆ

ಹಾರೂಗೇರಿ ಕ್ರಾಸ್‌ನಲ್ಲಿ ಪ್ರತಿಭಟನೆ

ಹಾರೂಗೇರಿ ಕ್ರಾಸ್: ಕಬ್ಬಿಗೆ ಹೆಚ್ಚಿನ ಬೆಂಬಲ ಬೆಲೆ ನೀಡಬೇಕೆಂದು ರೈತ ಸಂಘದಿಂದ ಶುಕ್ರವಾರ ಪ್ರತಿಭಟನೆ ನಡೆಸಿದರು.

ರಾಯಬಾಗ, ಅಥಣಿ ತಾಲೂಕಿನ ಸಾವಿರಾರು ರೈತರು ಸರ್ಕಾರ ಹಾಗೂ ಫ್ಯಾಕ್ಟರಿ ಮಾಲೀಕರ ವಿರುದ್ಧ ಘೋಷಣೆ ಕೂಗಿ ವಾಹನ ಸಂಚಾರ ತಡೆದು ಆಕ್ರೋಶ ವ್ಯಕ್ತಪಡಿಸಿದರು. ರೈತ ಮುಖಂಡರು ಮಾತನಾಡಿ, ಎಲ್ಲ ವಸ್ತುಗಳ ಬೆಲೆ ಹೆಚ್ಚಾಗಿವೆ. ಆದರೆ, ರೈತರ ಬೆಳೆಗೆ ಕಿಮ್ಮತ್ತಿಲ್ಲ. ಹೀಗಾದರೆ ಜೀವನ ನಡೆಸುವುದು ಹೇಗೆ ಎಂದು ಪ್ರಶ್ನಿಸಿದರು.

ಜಿಲ್ಲಾಧಿಕಾರಿ ಮೊಹಮ್ಮದ್ ರೋಷನ್ ಪ್ರತಿಭಟನೆ ಸ್ಥಳಕ್ಕೆ ಆಗಮಿಸಿ ಮನವಿ ಸ್ವೀಕರಿಸಿ, ಕಾರ್ಖಾನೆ ಮಾಲೀಕರೊಂದಿಗೆ ಮಾತನಾಡಿ ಕಬ್ಬಿನ ದರ ಏರಿಕೆ ಮಾಡುವದಾಗಿ ಭರವಸೆ ನೀಡಿದರು.

ರೈತ ಸಂಘದ ಅಧ್ಯಕ್ಷ ಚೂನಪ್ಪ ಪೂಜೇರಿ, ಶಶಿಕಾಂತ ಪಡಸಲಗಿ, ಪ್ರಕಾಶ ನಾಯಕ ಇತರರಿದ್ದರು.