raichur 
ಜಿಲ್ಲೆ

ಆಶಾ ಕಾರ್ಯಕರ್ತೆಯರ ಪ್ರತಿಭಟನೆ

Raichur - Reporter - Rachhai Swamy

ರಾಯಚೂರು ಆಶಾ ಕಾರ್ಯಕರ್ತೆಯ ರಿಗೆ ಕೇಂದ್ರ ಸರ್ಕಾರದ ಪ್ರೋತ್ಸಾಹ ಧನ ಸೇರಿದಂತೆ ವಿವಿಧ ಬೇಡಿಕೆಗಳ ಹಿಡೇರಿಕೆಗೆ ಒತ್ತಾಯಿಸಿ ಕರ್ನಾಟಕ ರಾಜ್ಯ ಸಂಯುಕ್ತ ಆಶಾ ಕಾರ್ಯಕರ್ತೆಯರ ಸಂಘದ ವತಿಯಿಂದ ನಗರದ ಟಿಪ್ಪು ಸುಲ್ತಾನ ಉದ್ಯಾನವನದಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.,

ಮುಖ್ಯಮಂತ್ರಿಗಳು ಘೋಷಿಸಿದ ರಾಜ್ಯದ ಗೌರವಧನ ಮತ್ತು ಕೇಂದ್ರದ ಪ್ರೋತ್ಸಾಹ ಧನ ಸೇರಿಸಿ ಮಾಸಿಕ ಕನಿಷ್ಠ 10 ಸಾವಿರ ರೂ. ಗ್ಯಾರಂಟಿಯನ್ನು ಈ ಏಪ್ರಿಲ್ನಿಂದ ಅನ್ವಯವಾಗುವಂತೆ ಆದೇಶ ಹೊರಡಿಸಬೇಕು. 2025ರ ಮಾರ್ಚ್ ರಾಜ್ಯ ಬಜೆಟ್‌ನಲ್ಲಿ ಎಲ್ಲಾ ಅಂಗನವಾಡಿ ಮತ್ತು ಬಿಸಿಯೂಟ ಕಾರ್ಯಕರ್ತೆಯರಿಗೆ 1000 ರೂ. ಪ್ರೋತ್ಸಾಹಧನ ಹೆಚ್ಚಳ ಮಾಡಿದಂತೆಯೇ ಎಲ್ಲಾ ಆಶಾ ಕಾರ್ಯಕರ್ತೆಯರಿಗೂ ಸಹ ಹೆಚ್ಚಳ ಮಾಡಬೇಕು ಎಂದು ಮನವಿ ಮಾಡಿದರು.

ಆಶಾ ಕಾರ್ಯಕರ್ತೆಯರು ಕಾರ್ಯನಿರ್ವಹಿಸುವ ಜನಸಂಖ್ಯೆಯ ಮಿತಿಯನ್ನು ಹೆಚ್ಚಿಸುವುದನ್ನು ಕೈಬಿಡಬೇಕು, ಯಾವುದೇ ಆಶಾ ಕಾರ್ಯಕರ್ತೆ ಯರನ್ನು ಕೆಲಸದಿಂದ ತೆಗೆಯಬಾರದು. ಅವೈಜ್ಞಾನಿಕವಾದ ಆಶಾ ಕಾರ್ಯಕರ್ತೆಯರ ಕಾರ್ಯನಿರ್ವಹಣಾ ಮೌಲ್ಯಮಾಪನ ಕೈಬಿಡಬೇಕು ಎಂದು ಒತ್ತಾಯಿಸಿದರು.

ಆಶಾ ಸುಗಮಕಾರರನ್ನು ಸೂಕ್ತ ವೇತನದೊಂದಿಗೆ ಮುಂದುವರೆಸಬೇಕು. ನಿವೃತ್ತ ಆಶಾಗಳಿಗೆ ಪಶ್ಚಿಮ ಬಂಗಾಳ ಮಾದರಿಯಲ್ಲಿ ಇಡಿಗಂಟು ನೀಡಬೇಕು ಎಂದು ಒತ್ತಾಯಿಸಿದರು. ನಗರ ಆಶಾಗಳಿಗೆ ರೂ.2000 ಗೌರವಧನ ಹೆಚ್ಚಿಸಬೇಕು. 2025ರ ಜೂನ್ ಮತ್ತು ಜುಲೈನಲ್ಲಿ ಕೇಂದ್ರ ಸರ್ಕಾರ ಹೆಚ್ಚಿಸಿದ ಪ್ರೋತ್ಸಾಹ ಧನವನ್ನು ರಾಜ್ಯದಲ್ಲಿ ಜಾರಿಗೊಳಿಸಬೇಕು ಸೇರಿದಂತೆ ಅನೇಕ ಬೇಡಿಕೆಗಳ ಈಡೇರಿಕೆಗೆ ಮನವಿ ಮಾಡಿದರು.

ಈ ಸಂದರ್ಭದಲ್ಲಿ ಅಧ್ಯಕ್ಷ ತಿರುಮಲರಾವ್, ಜಿಲ್ಲಾ ಕಾರ್ಯದರ್ಶಿ ಮಹೇಶ ಸಿ, ಆಶಾ ಕಾರ್ಯಕರ್ತೆಯರ ಸಂಘದ ಅಧ್ಯಕ್ಷೆ ಈರಮ್ಮ, ಡಾ.ಶಾರದಾ ನಾಯಕ, ಪ್ರಭಾವತಿ, ಶೈಲಜಾ, ಮಲ್ಲಮ್ಮ, ಶ್ರೀದೇವಿ, ಲಕ್ಷ್ಮೀ, ಗೌರಮ್ಮ, ಈರಮ್ಮ ಅಣ್ಣಪ್ಪ ಸೇರಿದಂತೆ ಅನೇಕರು ಇದ್ದರು.