ಜಿಲ್ಲೆ

ಪ್ರಥಮ ಚಿಕಿತ್ಸಾ ವೈದ್ಯರ ಸಂಘದಿ೦ದ ಪ್ರತಿಭಟನೆ 29ರಂದು

ಮಂಜುನಾಥ ಅಂಗಡಿ

ಧಾರವಾಡ: ಸರ್ಕಾರದಿಂದ ತರಬೇತಿ ಹಾಗೂ ಮಾನ್ಯತೆ ಪಡೆಯುವ ಬೇಡಿಕೆ ಈಡೇರಿಕೆಗೆ ಆಗ್ರಹಿಸಿ ಜ. 29ರಂದು ಬೆಂಗಳೂರಿನ ಸ್ವಾತಂತ್ರ‍್ಯ ಉದ್ಯಾನದಲ್ಲಿ ಕರ್ನಾಟಕ ಗ್ರಾಮೀಣ ಪ್ರಥಮ ಚಿಕಿತ್ಸಾ ವೈದ್ಯರ ಸಂಘದಿ೦ದ ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದು ಸಂಘದ ಅಧ್ಯಕ್ಷ ಎಂ.ಜಿ. ಕಾಡನ್ನವರ ಹೇಳಿದರು.
ನಗರದಲ್ಲಿ ಶುಕ್ರವಾರ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ಸೌಲಭ್ಯ ವಂಚಿತ ಹಳ್ಳಿಗಳಲ್ಲಿ ನಮ್ಮ ಸಂಘದಿAದ ವೈದ್ಯಕೀಯ ಸೇವೆ ನೀಡುತ್ತಿದ್ದಾರೆ. ಪ್ರತಿ ಹಳ್ಳಿಗಳಲ್ಲಿ ರೋಗಿಗಳ ಸೇವೆಯನ್ನು ಸಮಾಜಸೇವೆ ಎಂದು ಪರಿಗಣಿಸಿ ಪ್ರಥಮ ಚಿಕಿತ್ಸೆ ನೀಡುತ್ತಿದ್ದಾರೆ. ಸಂಘವು ೨೫ ಜಿಲ್ಲೆಗಳಲ್ಲಿ ಸದಸ್ಯರನ್ನು ಹೊಂದಿದೆ. ಆದರೆ, ೨೦೦೭ರ ಕೆಪಿಎಂಇ ಕಾಯ್ದೆ ಅನ್ವಯ ವೈದ್ಯಕೀಯ ಪ್ರಮಾಣಪತ್ರ ಇಲ್ಲದ ಕಾರಣ ನಕಲಿಗಳೆಂದು ಪರಿಗಣಿಸಿ ಅಽಕಾರಿಗಳು ನಮ್ಮ ಸೇವೆಗೆ ತಡೆಯೊಡ್ಡುತ್ತಿದ್ದಾರೆ. ಇದರಿಂದ ನಮ್ಮ ಕುಟುಂಬಗಳು ಬೀದಿಪಾಲಾಗುವ ಭಯ ಕಾಡುತ್ತಿದೆ. ಈ ಹಿಂದೆ ಪ್ರತಿಭಟನೆ ನಡೆಸಿದ್ದಾಗ ಅಂದಿನ ವೈದ್ಯಕೀಯ ಶಿಕ್ಷಣ ಸಚಿವರು ಆಂಧ್ರಪ್ರದೇಶ ಮಾದರಿಯಲ್ಲಿ ತರಬೇತಿ ನೀಡುವ ಭರವಸೆ ನೀಡಿದ್ದರು. ಈ ಸಂಬAಧ ಅಂದಿನಿAದ ಹೋರಾಟ ಮಾಡುತ್ತಿದ್ದರೂ ಪ್ರಯೋಜನವಾಗಿಲ್ಲ. ಆದ್ದಿರಂದ ಸಂಘದ ಬೇಡಿಕೆಗಳ ಈಡೇರಿಕೆಗಾಗಿ ಜ. ೨೯ರಂದು ಬೃಹತ್ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಗುರುನಾಥ ಮಡಿವಾಳರ, ಶ್ರೀರಂಗ ಕೊರ್ಲಹಳ್ಳಿ ಸುದ್ದಿಗೋಷ್ಠಿಯಲ್ಲಿದ್ದರು.