ಮಂಡ್ಯ ಜಿಲ್ಲೆಯ ಕೆರಗೋಡುನಲ್ಲಿ ನಡೆದ ಖಂಡನೆ ಖಂಡಿಸಿ ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ರಸ್ತೆ ಸಂಚಾರ ತಡೆದು ಬೃಹತ್ ಪ್ರತಿಭಟನೆ ನಡೆಸಿದರು. ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕ, ಪಾಲಿಕೆ ಸದಸ್ಯ ಶ್ರೀನಿವಾಸ್ ಮೋದ್ಕರ್, ಮುಖಂಡರಾದ ಎಸ್.ಮಲ್ಲನಗೌಡ, ಎಚ್.ತಿಪ್ಪಣ್ಣ, ಹನುಮಂತಪ್ಪ, ಕುಂಟನಾಳ ಮಲ್ಲಿಕಾರ್ಜುನ ಸ್ವಾಮಿ ಇತರರಿದ್ದರು.  
ಜಿಲ್ಲೆ

ಬಿಜೆಪಿ ಕಾರ್ಯಕರ್ತರ ಪ್ರತಿಭಟನೆ

Bellari - Heera Nayak

ಬಳ್ಳಾರಿ: ಮಂಡ್ಯ ಜಿಲ್ಲೆಯ ಕೆರಗೋಡುನಲ್ಲಿ ನಡೆದ ಖಂಡನೆ ಖಂಡಿಸಿ ಬಳ್ಳಾರಿ ನಗರದ ರಾಯಲ್ ವೃತ್ತದಲ್ಲಿ ಸೋಮವಾರ ಬಿಜೆಪಿ ಕಾರ್ಯಕರ್ತರು ರಸ್ತೆ ಸಂಚಾರ ತಡೆದು ಬೃಹತ್ ಪ್ರತಿಭಟನೆ ನಡೆಸಿದರು.

ಈ ವೇಳೆ ಬಿಜೆಪಿ ಜಿಲ್ಲಾಧ್ಯಕ್ಷ ಅನಿಲ್‌ಕುಮಾರ್ ಮೋಕ ಮಾತನಾಡಿ, ಕಾಂಗ್ರೆಸ್ ಸರ್ಕಾರ ಹಿಂದು ವಿರೋಧಿ ನೀತಿ ಅನುಸರಿಸುತ್ತಿದೆ. ರಾಮಮಂದಿರ ನಿರ್ಮಾಣಗೊಂಡ ವಿಚಾರದಲ್ಲೂ ಕಾಂಗ್ರೆಸ್‌ನ ನಾಯಕರು ಅಪಸ್ವರವನ್ನು ಎತ್ತುತ್ತಿದ್ದಾರೆ. ಅಲ್ಲದೆ ಇದೀಗ ಮಂಡ್ಯದಲ್ಲಿ ಹನುಮಾನ್ ಧ್ವಜವನ್ನು ಇಳಿಸಿರುವುದು ಖಂಡನೀಯ. ಈ ರೀತಿ ವರ್ತಿಸುತ್ತಿರುವ ಕಾಂಗ್ರೆಸ್‌ಗೆ ಲೋಕಸಭೆ ಚುನಾವಣೆಯಲ್ಲಿ ತಕ್ಕ ಪಾಠ ಕಲಿಸಬೇಕಿದೆ. ಸಿಎಂ ಸಿದ್ದರಾಮಯ್ಯ ಅವರು ಸೂಕ್ತ ಕ್ರಮ ಕೈಗೊಳ್ಳಬೇಕು. ಇಲ್ಲದಿದ್ದರೆ ಮುಂದಿನ ದಿನಗಳಲ್ಲಿ ಉಗ್ರ ಹೋರಾಟ ಮಾಡಲಾಗುವುದು ಎಂದು ಎಚ್ಚರಿಸಿದರು.

ರಾಯಲ್ ಸರ್ಕಲ್ನಲ್ಲಿ ಅರ್ಧ ಗಂಟೆಗಳ ಕಾಲ ರಸ್ತೆ ತಡೆ ಮಾಡಿದ ಹಿನ್ನೆಲೆಯಲ್ಲಿ ವಾಹನ ಸಂಚಾರ ಅಸ್ತವ್ಯಸ್ತಗೊಂಡಿತ್ತು. ವಾಹನ ಸಂಚಾರ ನಿಯಂತ್ರಣಕ್ಕೆ ಪೊಲೀಸರು ಹರಸಾಹಸ ಪಡುವಂತಾಯಿತು.

ಪಾಲಿಕೆ ಸದಸ್ಯ ಶ್ರೀನಿವಾಸ್ ಮೋದ್ಕರ್, ಮುಖಂಡರಾದ ಎಸ್.ಮಲ್ಲನಗೌಡ, ಎಚ್.ತಿಪ್ಪಣ್ಣ, ಹನುಮಂತಪ್ಪ, ಕುಂಟನಾಳ ಮಲ್ಲಿಕಾರ್ಜುನ ಸ್ವಾಮಿ, ರಾಮಾಂಜನೇಯ, ವೆಂಕಟೇಶ್, ಮಂಜುನಾಥ್‌ಗೌಡ ಸೇರಿದಂತೆ ಜಿಲ್ಲಾ ವಿವಿಧ ಮೋರ್ಚಾಗಳ ಪದಾಧಿಕಾರಿಗಳು, ಕಾರ್ಯಕರ್ತರು ಪಾಲ್ಗೊಂಡಿದ್ದರು.