ಜಿಲ್ಲೆ

ಬಸ್ ಸೌಲಭ್ಯಕ್ಕಾಗಿ ಕರ್ನಾಟಕ ರೈತ ಸಂಘದ ತಾಲೂಕು ಘಟಕದಿಂದ ಪ್ರತಿಭಟನೆ

ಬೆಳಗಾವಿ: ಬೆಳಗಾವಿ ತಾಲೂಕಿನ ಅಗಸಗಾ ಗ್ರಾಮದ ಸುತ್ತಲಿನ ಗ್ರಾಮಗಳಿಗೆ ದಿನನಿತ್ಯ ಸಮರ್ಪಕ ಬಸ್ ಸೌಕರ್ಯ ಕಲ್ಪಿಸುವಂತೆ ಒತ್ತಾಯಿಸಿ ಕರ್ನಾಟಕ ರೈತ ಸಂಘದ ತಾಲೂಕು ಘಟಕದಿಂದ ಸೋಮವಾರ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಯಿತು.
ಅಗಸಗಾ ಗ್ರಾಮದ ಸುತ್ತಲಿನ ಗ್ರಾಮಗಳ ನೂರಾರು ವಿದ್ಯಾರ್ಥಿಗಳು ಶಾಲೆ-ಕಾಲೇಜುಗಳಿಗೆ ಬಸ್‌ನಲ್ಲಿ ಬೆಳಗಾವಿಗೆ ಹೋಗುತ್ತಾರೆ. ಆದರೆ, ಬೆಳಗ್ಗೆ ಹಾಗೂ ಸಂಜೆ ಸಮರ್ಪಕವಾಗಿ ಬಸ್ ಸೌಲಭ್ಯ ದೊರೆಯುತ್ತಿಲ್ಲ. ಸಂಜೆ ವೇಳೆ ಬಸ್‌ಗಳ ಸರಿಯಾಗಿ ಬರುವುದಿಲ್ಲ. ಇದರಿಂದ ವಿದ್ಯಾರ್ಥಿಗಳು ಮನೆಗಳಿಗೆ ಬಂದು ತಲುಪುವುದು ರಾತ್ರಿ 8.30 ಆಗುತ್ತಿದೆ. ಇದರಿಂದ ವಿದ್ಯಾಭ್ಯಾಸಕ್ಕೆ ತೊಂದರೆಯಾಗುತ್ತಿದೆ. ಹೀಗಾಗಿ ಪ್ರತಿದಿನ ಸಂಜೆ 5 ಗಂಟೆ ಒಂದು ಬಸ್ ಹಾಗೂ ಸಂಜೆ 6 ಗಂಟೆಗೆ ವಿದ್ಯಾರ್ಥಿಗಳಿಗಾಗಿಯೇ ಒಂದು ಬಸ್‌ಅನ್ನು ಬಿಡಬೇಕು ಎಂದು ಒತ್ತಾಯಿಸಿದರು.
ಬಸವರಾಜ ಪಾಟೀಲ, ಕಲಗೌಡ ಪಾಟೀಲ, ವೈಜು ಲೂಮ್ಯಾಳ, ಪ್ರಕಾಶ ಲೋಹಾರ, ದುಂಡಪ್ಪ ಹೊಸಪೇಟೆ ಇತರರಿದ್ದರು.