ಬೆಳಗಾವಿ: ಭಾರತ ಕಮ್ಯೂನಿಸ್ಟ್ ಪಕ್ಷದ ಮಹಿಳಾ ಕಾರ್ಯಕರ್ತರು ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಗುರುವಾರ ಕೇಂದ್ರ ಸರ್ಕಾರದ ವಿರುದ್ದ ಪ್ರತಿಭಟಿಸಿ ಆಕ್ರೋಶ ವ್ಯಕ್ತಪಡಿಸಿದರು.
ಬಿಜೆಪಿ 2014ರ ಚುನಾವಣೆಯಲ್ಲಿ ಜನರಿಗೆ ನೀಡಿದ ಆಶ್ವಾಸನೆಗಳನ್ನು ಈಡೇರಿಸಿಲ್ಲ. 9 ವರ್ಷಗಳಿಂದ ಕೇಂದ್ರ ಸರ್ಕಾರ ಸುಳ್ಳು ಹೇಳುತ್ತಲೆ ಬಂದಿದೆೆ. ಈ ಸರ್ಕಾರ ಬಂದಾಗಿನಿಂದ ಬೆಲೆ ಏರಿಕೆಯಾಗುತ್ತಿದೆ ಎಂದು ಕೇಂದ್ರದ ವಿರುದ್ಧ ಘೋಷಣೆ ಕೂಗಿ, ಪ್ರತಿಭಟಿಸಿದರು. ಅನ್ನಭಾಗ್ಯಕ್ಕೆ 5 ಕೆಜಿ ಅಕ್ಕಿ ಕೊಡಬೇಕು. ನಿರುದ್ಯೋಗಿಗಳಿಗೆ ಉದ್ಯೋಗ ನೀಡಬೇಕು ಅಥವಾ ನಿರುದ್ಯೋಗದ ಭತ್ಯ ನೀಡಬೇಕು. ಸಾರ್ವಜನಿಕ ವಲಯಗಳನ್ನು ಖಾಸಗಿಕರಣ ಮಾಡುವುದನ್ನು ನಿಲ್ಲಿಸಬೇಕು. ರಾಜ್ಯದ ತೆರಿಗೆ ಪಾಲಿನಲ್ಲಿನ ತಾರತಮ್ಯ ನಿಲ್ಲಬೇಕು ಎಂದು ಒತ್ತಾಯಿಸಿ ಜಿಲ್ಲಾಡಳಿತದ ಮೂಲಕ ಕೇಂದ್ರ ಸರ್ಕಾರಕ್ಕೆ ಮನವಿ ರವಾನಿಸಿದರು. ಜಿ.ವಿ. ಕುಲಕರ್ಣಿ, ಮಂದಾ ನೇವಗಿ, ಸಂದ್ಯಾ ಕುಲಕರ್ಣಿ, ಇತರರು ಪ್ರತಿಭಟನೆ ವೇಳೆ ಇದ್ದರು.