ಮಂಡ್ಯ: ಕಾಶ್ಮೀರದ ಪಹಲ್ಗಾಮ್‌ನಲ್ಲಿ ಭಯೋತ್ಪಾದಕರು ದಾಳಿ ನಡೆಸಿ ಅಮಾಯಕರನ್ನು ಕೊಂದ ಕೃತ್ಯ ಖಂಡಿಸಿ ನಗರದಲ್ಲಿ ಬಿಜೆಪಿ, ಆರ್‌ಎಸ್‌ಎಸ್ ಹಾಗೂ ಹಿಂದು ಜಾಗರಣ ವೇದಿಕೆ ಕಾರ್ಯಕರ್ತರು ಬೃಹತ್ ಪಂಜಿನ ಮೆರವಣಿಗೆ ನಡೆಸಿದರು.
ಜಯಚಾಮರಾಜೇಂದ್ರ ಒಡೆಯರ್ ವೃತ್ತದಲ್ಲಿ ಜಮಾಯಿಸಿದ ಕಾರ್ಯಕರ್ತರು, ಭಯೋತ್ಪಾದಕರ ವಿರುದ್ಧ ಘೋಷಣೆ ಮೊಳಗಿಸಿದರು. ನಂತರ ಜೆ.ಸಿ ವೃತ್ತದಿಂದ ಪಂಜು ಹಿಡಿದು ಹೊರಟ ಕಾರ್ಯಕರ್ತರು, ಆರ್.ಪಿ.ರಸ್ತೆ, ನೂರಡಿ ರಸ್ತೆ, ವಿ.ವಿ ರಸ್ತೆ, ಮಹಾವೀರ ವೃತ್ತ ಸೇರಿದಂತೆ ಪ್ರಮುಖ ಬೀದಿಗಳಲ್ಲಿ ಮೆರವಣಿಗೆ ನಡೆಸಿ ಕಾಶ್ಮೀರದ ಘಟನೆಯನ್ನು ಖಂಡಿಸಿದರು. ಅಮಾಯಕರನ್ನು ಕೊಂದ ಭಯೋತ್ಪಾದಕರಿಗೆ ಕಠಿಣ ಶಿಕ್ಷೆ ನೀಡಬೇಕೆಂದು ಆಗ್ರಹಿಸಿದರು.
ಬಿಜೆಪಿ ರೈತ ಮೋರ್ಚಾ ಜಿಲ್ಲಾ ಘಟಕದ ಅಧ್ಯಕ್ಷ ಅಶೋಕ್ ಜಯರಾಂ, ಬಜರಂಗಸೇನೆ ರಾಜ್ಯ ಘಟಕದ ಅಧ್ಯಕ್ಷ ಬಿ.ಮಂಜುನಾಥ್, ಜೀವಧಾರೆ ಟ್ರಸ್ಟ್ ಅಧ್ಯಕ್ಷ ನಟರಾಜು, ಬಿಜೆಪಿ ನಗರ ಘಟಕದ ಅಧ್ಯಕ್ಷ ವಸಂತ್‌ಕುಮಾರ್, ಕೆಂಪಬೋರಯ್ಯ, ಎಚ್.ಆರ್.ಅಶೋಕ್‌ಕುಮಾರ್, ವಿವೇಕ್, ಶಿವಕುಮಾರ್ ಆರಾಧ್ಯ, ಅರವಿಂದ್, ಕಾರ್ತಿಕ್ ಇತರರಿದ್ದರು.