ಜಿಲ್ಲೆ

ನಾಮಫಲಕಗಳಲ್ಲಿ ಶೇ.60 ಕನ್ನಡ ಬಳಕೆ ಕಡ್ಡಾಯಗೊಳಿಸಲು ಆಗ್ರಹಿಸಿ ಪ್ರತಿಭಟನೆ

ಮೈಸೂರು: ಅಂಗಡಿ ಮುಂಗಟ್ಟುಗಳು, ಮಾಲ್‌ಗಳು, ಖಾಸಗಿ ಕಚೇರಿಗಳು, ಶಾಲಾ-ಕಾಲೇಜು ಹಾಗೂ ಜಾಹೀರಾತು ಫಲಕ ಗಳಲ್ಲಿ ಶೇ.60ರಷ್ಟು ಕನ್ನಡ ಬಳಕೆ ಕಡ್ಡಾಯ ಆದೇಶವನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸಬೇಕು ಎಂದು ಆಗ್ರಹಿಸಿ ಕರ್ನಾಟಕ ಸೇನಾ ಪಡೆ ಕಾರ್ಯಕರ್ತರು ನಗರಾಪಾಲಿಕೆ ಮುಂಭಾಗ ಪ್ರತಿಭಟನೆ ನಡೆಸಿದರು.

ಎಲ್ಲ ನಾಮಫಲಕಗಳಲ್ಲಿ ಶೇ.60ರಷ್ಟು ಕನ್ನಡ ಬಳಸಬೇಕು ಎಂಬುದು ಹೊಸ ಕಾನೂನು ಏನು ಅಲ್ಲ. ಹೀಗಿದ್ದರೂ ಶೇ.60 ರಷ್ಟು ಕನ್ನಡ ಬಳಸಬೇಕು ಎಂಬ ಆದೇಶ ಪಾಲನೆಯಾಗುತ್ತಿಲ್ಲ.ನಗರ ಪಾಲಿಕೆ ಅಧಿಕಾರಿಗಳು ಈ ಬಗ್ಗೆ ಪರಿಶೀಲಿಸಿ ಸಂಬಂಧಿಸಿದವರ ಮೇಲೆ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.

ಪ್ರತಿಭಟನೆಯಲ್ಲಿ ಜಿಲ್ಲಾಧ್ಯಕ್ಷ ತೇಜೇಶ್ ಲೋಕೇಶ್ ಗೌಡ, ಪದಾಧಿಕಾರಿಗಳಾದ ಕೃಷ್ಣಯ್ಯ, ಪ್ರಭುಶಂಕರ್, ಪಿ.ಪ್ರಜೀಶ್, ವರಕೂಡು ಕೃಷ್ಣೇಗೌಡ, ಬೋಗಾದಿ ಸಿದ್ದೇಗೌಡ, ನಾಗರಾಜು, ಸಿಂಧುವಳ್ಳಿ ಶಿವಕುಮಾರ್, ಮಹದೇವಸ್ವಾಮಿ, ನಂದಕುಮಾರ್ ಗೌಡ, ಹನುಮಂತಯ್ಯ, ಮಂಜುಳಾ, ನೇಹಾ, ಭಾಗ್ಯಮ್ಮ, ಬೇಬಿ ರತ್ನ ಹಾಗೂ ಇತರರು ಪಾಲ್ಗೊಂಡಿದ್ದರು.