ಜಿಲ್ಲೆ

ವಸತಿಹೀನರಿಗೆ ನಿವೇಶನ ಮಂಜೂರಿಗೆ ಆಗ್ರಹಿಸಿ ಪ್ರತಿಭಟನೆ

ಮೈಸೂರು: ಜಿಲ್ಲೆಯಾದ್ಯಂತ ಇರುವ ನಿವೇಶನಗಳನ್ನು ವಸತಿಹೀನರಿಗೆ ಮಂಜೂರು ಮಾಡಬೇಕೆಂದು ಒತ್ತಾಯಿಸಿ ವಸತಿ ಮತ್ತು ನಿವೇಶನ ರಹಿತರ ಹೋರಾಟ ಸಮಿತಿ ವತಿಯಿಂದ ಬುಧವಾರ ಜಿಲ್ಲಾಧಿಕಾರಿ ಕಚೇರಿ ಬಳಿ ಪ್ರತಿಭಟನೆ ನಡೆಸಲಾಯಿತು.

ರಾಜ್ಯದಲ್ಲಿ ರಾಜೀವ್‌ಗಾಂಧಿ ವಸತಿ ನಿಗಮದ ಅಂಕಿ-ಅಂಶಗಳ ಪ್ರಕಾಶ ಒಟ್ಟು ವಸತಿಹೀನ ಕುಟುಂಬಗಳ ಸಂಖ್ಯೆ 27 ಲಕ್ಷಕ್ಕೂ ಅಧಿಕವಾಗಿದೆ. ಆದರೆ, ಇತ್ತೀಚಿನ ದಿನಗಳಲ್ಲಿ ಈ ಸಂಖ್ಯೆ ಇನ್ನೂ ಹೆಚ್ಚಾಗಿದೆ. ಇವರಲ್ಲಿ ಬಹುತೇಕ ಕುಟುಂಬಗಳು ಭೂ ರಹಿತ ಕೃಷಿ ಕೂಲಿಗಳಾಗಿದ್ದು, ದಲಿತ, ಆದಿವಾಸಿ, ಹಿಂದುಳಿದ ಮತ್ತು ಅಲ್ಪಸಂಖ್ಯಾತ ಕುಟುಂಬಗಳಾಗಿವೆ. ಈ ಕುಟುಂಬಗಳು ನಿವೇಶನ ಹೊಂದಿರದೆ ಇರುವುದರಿಂದ ಇವರಿಗೆ ಸರ್ಕಾರದ ವಸತಿ ಯೋಜನೆಯಲ್ಲಿ ಮನೆ ಮಂಜೂರು ಸಾಧ್ಯವಾಗಿಲ್ಲ. ಹೀಗಾಗಿ ಈ ಕುಟುಂಬಗಳಿಗೆ ನಿವೇಶನ ನೀಡಬೇಕು ಎಂದು ಒತ್ತಾಯಿಸಿದರು.