ಹುನಗುಂದದಲ್ಲಿ ದಾಸೋಹ ನೌಕರರ ಸಂಘದ ತಾಲೂಕು ಘಟಕದ ವತಿಯಿಂದ ಮಂಗಳವಾರ ಪ್ರತಿಭಟನೆ ನಡೆಸಲಾಯಿತು. ಸಿದ್ದಮ್ಮ ಕಲಗೋಡಿ, ಮಹಾದೇವಿ ಚಲವಾದಿ, ಶಾರದಾ ಗೋನಾಳ, ಗೀತಾ ತೆಂಗಿನಕಾಯಿ ಇದ್ದರು. 
ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಪ್ರತಿಭಟನೆ

ಹುನಗುಂದ: ವಿವಿಧ ಬೇಡಿಕೆಗಳ ಈಡೇರಿಕೆಗೆ ಒತ್ತಾಯಿಸಿ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಘಟಕದಿಂದ ಮಂಗಳವಾರ ಪಟ್ಟಣದ ಪ್ರಮುಖ ಬೀದಿಗಳಲ್ಲಿ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಅಧ್ಯಕ್ಷೆ ಸಿದ್ದಮ್ಮ ಕಲಗೋಡಿ ಮಾತನಾಡಿ, ಮಧ್ಯಾಹ್ನದ ಬಿಸಿಯೂಟ ಯೋಜನೆ ಪ್ರಾರಂಭವಾದ ವರ್ಷದಿಂದಲೂ ಮಕ್ಕಳ ಶೈಕ್ಷಣಿಕ ಉನ್ನತಿಗೆ ದಾಸೋಹ ಸಿಬ್ಬಂದಿ ಶ್ರಮಿಸುತ್ತಿದ್ದಾರೆ.

ದಿನಕ್ಕೆ 6 ಗಂಟೆಗಿಂತಲೂ ಅಧಿಕ ಸಮಯ ಕೆಲಸ ಮಾಡುತ್ತಿರುವ ಇವರ ಪರಿಶ್ರಮ ಗುರುತಿಸಿ ಕನಿಷ್ಠ ಕೂಲಿ 21 ಸಾವಿರ ರೂ. ನೀಡಬೇಕು. ಬಿಸಿಯೂಟ ನೌಕರರ ನ್ಯಾಯೋಚಿತ ಬೇಡಿಕೆಗಳನ್ನು ಈಡೇರಿಸಬೇಕು ಎಂದು ಒತ್ತಾಯಿಸಿ

ಪ್ರತಿಭಟನೆಯಲ್ಲಿ ಅಕ್ಷರ ದಾಸೋಹ ನೌಕರರ ಸಂಘದ ತಾಲೂಕು ಪ್ರಧಾನ ಕಾರ್ಯದರ್ಶಿ ಮಹಾದೇವಿ ಚಲವಾದಿ, ಶಾರದಾ ಗೋನಾಳ, ಗೀತಾ ತೆಂಗಿನಕಾಯಿ ಪಾಲ್ಗೊಂಡಿದ್ದರು.