ಇಳಕಲ್ಲ ನಗರದಲ್ಲಿ ಸಮರ್ಪಕವಾಗಿ ನೀರು ಪೂರೈಸಬೇಕೆಂದು ಆಗ್ರಹಿಸಿ ಸಾರ್ವಜನಿಕರು ನಗರಸಭೆಗೆ ಮುತ್ತಿಗೆ ಹಾಕಿ ಪ್ರತಿಭಟನೆ ನಡೆಸಿದರು. 
ಜಿಲ್ಲೆ

ಕುಡಿಯುವ ನೀರು ಪೂರೈಸಲು ಆಗ್ರಹಿಸಿ ಪ್ರತಿಭಟನೆ

ದತ್ತಾತ್ರೇಯ ಪಿ ಕುಲಕರ್ಣಿ

ಇಳಕಲ್ಲ(ಗ್ರಾ): ನಗರದಲ್ಲಿ ತಿಂಗಳಿನಿಂದ 24*7 ಕುಡಿಯುವ ನೀರು ಪೂರೈಕೆಯಲ್ಲಿ ವ್ಯತ್ಯಯವಾದ ಹಿನ್ನೆಲೆಯಲ್ಲಿ ಸೋಮವಾರ ಮಹಿಳೆಯರು ನಗರಸಭೆಗೆ ಮುತ್ತಿಗೆ ಹಾಕಿದರು.

ನಗರಸಭೆಗೆ ಆಗಮಿಸಿದ ನೂರಾರು ಮಹಿಳೆಯರು, ಈಗ ದಸರಾ ದೊಡ್ಡ ಹಬ್ಬವಾಗಿದೆ. ಆದರೆ ಸಮರ್ಪಕವಾಗಿ ನೀರು ಸಿಗದೆ ಮನೆಗಳಲ್ಲಿ ನೀರಿಲ್ಲದೆ ಪರದಾಡುವಂತಾಗಿದೆ. ನೀರಿಲ್ಲದಿದ್ದರೆ ಹೇಗೆ ಮನೆ ನಡೆಸಬೇಕು? ಎಂದು ಅಧಿಕಾರಿಗಳನ್ನು ತರಾಟೆಗೆ ತೆಗೆದುಕೊಂಡರು. ಕೂಡಲೇ ಮೊದಲಿನಂತೆ ನೀರು ಬಿಡಬೇಕೆಂದು ಆಗ್ರಹಿಸಿದರು.