ಸಚಿವ ಜಮೀರ್ ಹೇಳಿಕೆ ಖಂಡಿಸಿ ಜೆಡಿಎಸ್ ಕಾರ್ಯಕರ್ತರು ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು. ಕಡಿದಾಳ್ ಗೋಪಾಲ್, ಶಾರದಾ ಪೂರ‌್ಯಾನಾಯ್ಕಾ, ಗೀತಾ ಸತೀಶ್, ಶಾರದಾ ಅಪ್ಪಾಜಿ ಇತರರಿದ್ದರು.  
ಜಿಲ್ಲೆ

ಸಚಿವ ಸಂಪುಟದಿಂದ ಜಮೀರ್ ವಜಾಕ್ಕೆ ಆಗ್ರಹಿಸಿ ಪ್ರತಿಭಟನೆ

ಶಿವಮೊಗ್ಗ: ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಬಗ್ಗೆ ಚುನಾವಣೆ ಪ್ರಚಾರದ ವೇಳೆ ಅಸಭ್ಯ ಪದ ಬಳಸಿದ ಸಚಿವ ಜಮೀರ್ ಅಹಮ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ವಜಾ ಮಾಡಿ ಕ್ರಿಮಿನಲ್ ಮೊಕದ್ದಮೆ ದಾಖಲಿಸಬೇಕು ಎಂದು ಆಗ್ರಹಿಸಿ ಜೆಡಿಎಸ್ ಕಾರ್ಯಕರ್ತರು ಶನಿವಾರ ಡಿಸಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆ ಸಂದರ್ಭದಲ್ಲಿ ಕೇಂದ್ರ ಸಚಿವ ಎಚ್.ಡಿ.ಕುಮಾರಸ್ವಾಮಿ ಅವರ ಬಣ್ಣದ ಬಗ್ಗೆ ಜಮೀರ್ ಅಹಮ್ಮದ್ ಖಾನ್ ಮಾತನಾಡಿರುವುದು ಅಕ್ಷಮ್ಯ. ಅನಾಗರಿಕ ಹಾಗೂ ಕೀಳು ಸಂಸ್ಕೃತಿ ಹೇಳಿಕೆಯಾಗಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಮೀರ್ ಅಹಮ್ಮದ್ ಖಾನ್ ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು. ಅವರ ವಿರುದ್ಧ ಮೊಕದ್ದಮೆ ದಾಖಲಿಸಬೇಕು ಎಂದು ಒತ್ತಾಯಿಸಿದರು. ಇದಕ್ಕೂ ಮುನ್ನ ಜೆಡಿಎಸ್ ಜಿಲ್ಲಾ ಕಾರ್ಯಾಲಯದಿಂದ ಡಿಸಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.

ಜೆಡಿಎಸ್ ಜಿಲ್ಲಾಧ್ಯಕ್ಷ ಕಡಿದಾಳ್ ಗೋಪಾಲ್, ಶಾಸಕಿ ಶಾರದಾ ಪೂರ‌್ಯನಾಯ್ಕ, ರಾಜ್ಯ ಕಾರ್ಯದರ್ಶಿ ಶಾರದಾ ಅಪ್ಪಾಜಿ, ಮಹಿಳಾ ಘಟಕದ ಜಿಲ್ಲಾಧ್ಯಕ್ಷೆ ಗೀತಾ ಸತೀಶ್, ಪ್ರಮುಖರಾದ ಕೆ.ಎನ್.ರಾಮಕೃಷ್ಣ, ನರಸಿಂಹ ಗಂಧದಮನೆ, ಎಚ್.ಎಂ.ಸಂಗಯ್ಯ, ಸಂಜಯ್ ಕಶ್ಯಪ್, ಎಸ್.ವಿ.ರಾಜಮ್ಮ, ದಯಾನಂದ್, ಎಸ್.ಎಲ್.ನಿಖಿಲ್, ಸಿದ್ದಪ್ಪ, ತ್ಯಾಗರಾಜ್, ಚಂದ್ರಶೇಖರ್, ಎಚ್.ಎನ್.ಧರ್ಮರಾಜ್, ಕೆ.ಎಂ.ನಾಗೇಶ್, ಡಿ.ಚಂದ್ರನಾಯ್ಕ, ವಿನಯ್, ರಘು ಇತರರಿದ್ದರು.