ಬೆಂಗಳೂರು: ಗೌರಿ-ಗಣೇಶ ಹಬ್ಬದ ನಡುವೆ ತಮಿಳುನಾಡಿಗೆ ಕಾವೇರಿ ನೀರು ಹರಿಸುವ ಕುರಿತ ಸುಪ್ರೀಂಕೋರ್ಟ್ ಆದೇಶ ಬೆನ್ನಲ್ಲೇ ನಗರದಲ್ಲಿ ತೀವ್ರ ಕಟ್ಟೆಚ್ಚರ ವಹಿಸಲಾಗಿದೆ. ಈಗಾಗಲೇ ನಗರದ ಕೆಲ ಸೂಕ್ಷ್ಮ ಮತ್ತು ಅತೀ ಸೂಕ್ಷ್ಮ ಪ್ರದೇಶಗಳಲ್ಲಿ ಕೆಎಸ್‌ಆರ್‌ಪಿ ಮತ್ತು ಸಿಎಆರ್ ತುಕಡಿಗಳ ನಿಯೋಜಿಸಲಾಗಿದೆ. ಇದರೊಂದಿಗೆ ಸ್ಥಳೀಯ ಪೊಲೀಸ್ ಠಾಣೆಗಳ ಸಿಬ್ಬಂದಿ ಮತ್ತು ಹೊಯ್ಸಳ ಸಿಬ್ಬಂದಿ ಗಸ್ತು ಹೆಚ್ಚಳ ಮಾಡಲಾಗಿದೆ. ಈ ಮಧ್ಯೆ ತಮಿಳಿಗರು ಹೆಚ್ಚು ನೆಲೆಸಿರುವ ಶ್ರೀರಾಮಪುರ, ಶೇಷಾದ್ರಿಪುರ ಸೇರಿ ಕೆಲವೆಡೆ ಬಿಗಿ ಭದ್ರತೆ ಕೈಗೊಳ್ಳಲಾಗಿದೆ ಒಟ್ಟಾರೆ ವಿಶೇಷವಾಗಿ ಎರಡು ಸಾವಿರಕ್ಕೂ ಹೆಚ್ಚು ಮಂದಿ ಪೊಲೀಸ್ ಅಧಿಕಾರಿ-ಸಿಬ್ಬಂದಿ ಕರ್ತವ್ಯ ನಿರ್ವಹಿಸುತ್ತಿದ್ದಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.