ಜಿಲ್ಲೆ

ಬಗರ್‌ಹುಕುಂ ಸಾಗುವಳಿದಾರರಿಗೆ ಹಕ್ಕುಪತ್ರಕ್ಕೆ ಆಗ್ರಹಿಸಿ ಮೈಸೂರಿನಲ್ಲಿ ಪ್ರತಿಭಟನೆ

Mysuru

ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಅಖಿಲ ಭಾರತ ರೈತ ಕೃಷಿ ಕಾರ್ಮಿಕರ ಸಂಘಟನೆ (ಎಐಕೆಕೆಎಂಎಸ್) ವತಿಯಿಂದ ತಾಲೂಕು ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಬಗರ್‌ಹುಕುಂ ಸಾಗುವಳಿದಾರರಿಗೆ ಕೂಡಲೇ ಹಕ್ಕುಪತ್ರ ವಿತರಣೆ ಮಾಡಬೇಕು, ಹಂಗಾಮಿ ಸಾಗುವಳಿ ನೀಡಿರುವ ರೈತರಿಗೆ ಕಾಯಂ ಸಾಗುವಳಿಯನ್ನು ತಕ್ಷಣ ನೀಡಬೇಕು. ಅರಣ್ಯದಂಚಿನ ಭೂಮಿಯಲ್ಲಿ ಕೃಷಿ ಚಟುವಟಿಕೆ ಕೈಗೊಂಡಿರುವ ರೈತರಿಗೆ ಕೂಡಲೇ ಹಕ್ಕುಪತ್ರ ನೀಡಬೇಕು ಎಂದು ಒತ್ತಾಯಿಸಲಾಯಿತು.