ಜಿಲ್ಲೆ

ಶ್ರೀರಂಗಪಟ್ಟಣದಲ್ಲಿ ಪ್ರತಿಭಟನೆ

ಮಾದೇಶ್ ತಿ.ನರಸೀಪುರ

ಶ್ರೀರಂಗಪಟ್ಟಣ: ತಾಲೂಕಿನ ಹಳೇ ಕಿರಂಗೂರಿನ ರಾಮಮಂದಿರ ವಿವಾದ ಸಂಬಂಧ ಪಟ್ಟಣದ ತಾಲೂಕು ಕಚೇರಿ ಮುಂಭಾಗ ಭೂಮಿ ತಾಯಿ ಹೋರಾಟ ಸಮಿತಿ ನಡೆಸುತ್ತಿದ್ದ ಪ್ರತಿಭಟನೆ 3 ದಿನವೂ ಮುಂದುವರಿಯಿತು. ಜಿಲ್ಲಾಧಿಕಾರಿ, ಮುಜರಾಯಿ ಅಧಿಕಾರಿ ಸೇರಿದಂತೆ ಪೊಲೀಸ್ ಅಧಿಕಾರಿಗಳು ಪ್ರತಿಭಟನಾಕಾರರ ಮನವಿ ಆಲಿಸದೆ ನಿರ್ಲಕ್ಷಿಸಿದ್ದಾರೆ ಎಂದು ಆರೋಪಿಸಿ ಪೊಲೀಸ್ ಠಾಣೆ ಮುಂಭಾಗ ಬಾಯಿ ಬಡಿದುಕೊಂಡು ಅಸಮಾಧಾನ ವ್ಯಕ್ತಪಡಿಸಿದರು. ಸಂಘಟನೆ ಕಾರ್ಯಕರ್ತರು ರೈತ ನಾಯಕ ಕೆ.ಎಸ್.ನಂಜುಂಡೇಗೌಡ ನೇತೃತ್ವದಲ್ಲಿ ಜಿಲ್ಲಾಡಳಿತ ನೀಡಿದ್ದ ಆದೇಶ ಪತ್ರವನ್ನು ಸುಟ್ಟು ಆಕ್ರೋಶ ಹೊರಹಾಕಿದರು.