ಜಿಲ್ಲೆ

ವಸತಿ ಸವಲತ್ತಿಗೆ ಆಗ್ರಹಿಸಿ ಸಿಪಿಐ ನೇತೃತ್ವದಲ್ಲಿ ಪ್ರತಿಭಟನೆ

Chitradurga

ಚಿತ್ರದುರ್ಗ: ನಿವೇಶನ ಮತ್ತು ವಸತಿರಹಿತರಿಗೆ ಸೂರು ಕಲ್ಪಿಸುವಂತೆ ಒತ್ತಾಯಿಸಿ ಭಾರತ ಕಮ್ಯುನಿಸ್ಟ್ ಪಕ್ಷದ ನೇತೃತ್ವದಲ್ಲಿ ಡಿಸಿ ಕಚೇರಿ ಬಳಿ ಮಂಗ ಳವಾರ ಪ್ರತಿಭಟನೆ ನಡೆಸಲಾಯಿತು. ನಗರದ ಪಕ್ಷದ ಕಾರ‌್ಯಾಲಯದಿಂದ ಡಿಸಿ ಕಚೇರಿವರೆಗೆ ಮೆರವಣಿಗೆ ನಡೆಸಿದ ಪ್ರತಿಭಟನಾಕಾರರು ರಾಜ್ಯಸರ್ಕಾರದ ವಿರುದ್ಧ ಘೋಷಣೆ ಕೂಗಿದರು.

ಸಿಪಿಐ ಜಿಲ್ಲಾ ಮಂಡಳಿ ಸದಸ್ಯ ಬಿ.ಬಸವರಾಜಪ್ಪ ಮಾತನಾಡಿ, ರಾಜ್ಯದಲ್ಲಿ 50 ಲಕ್ಷಕ್ಕೂ ಹೆಚ್ಚು ನಿವೇಶನ, ವಸತಿ ರಹಿತರು ಇದ್ದಾರೆ. ಸೂರು ಕಲ್ಪಿಸುವಂತೆ ಆಗ್ರಹಿಸಿ ಸರ್ಕಾರಕ್ಕೆ ಅನೇಕ ಮನವಿ ಮಾಡಿದ್ದರೂ ಪ್ರಯೋಜನವಾಗಿಲ್ಲ. ಈಗಲಾದರೂ ಸರ್ಕಾರ ನಿವೇಶನ ರಹಿತರಿಗೆ ನಿವೇಶನ ಹಾಗೂ ಜಾಗ ಇದ್ದವರಿಗೆ ಮನೆ ಕಟ್ಟಿಸಿಕೊಡಬೇಕು. ಇಲ್ಲವಾದಲ್ಲಿ ಮುಂದಿನ ದಿನಗಳಲ್ಲಿ ವಿಧಾನಸೌಧಕ್ಕೆ ಮುತ್ತಿಗೆ ಸೇರಿ ಪ್ರತಿಭಟನೆ ತೀವ್ರಗೊಳಿಸುವುದಾಗಿ ಎಚ್ಚರಿಸಿದರು.

ಪಕ್ಷದ ಜಿಲ್ಲಾ ಸಹ ಕಾರ‌್ಯದರ್ಶಿ ದೊಡ್ಡುಳ್ಳಾರ್ತಿ ಕರಿಯಣ್ಣ ಮಾತನಾಡಿ, ನರೇಂದ್ರ ಮೋದಿ ಪ್ರಧಾನಿ ಆದಂದಿನಿಂದಲೂ ಒಳ್ಳೆಯ ದಿನ ಬರುತ್ತದೆಂದು ಜನರ ಮೂಗಿಗೆ ತುಪ್ಪ ಸವರುವ ಕೆಲಸ ಮಾಡುತ್ತಿದ್ದಾರೆ. ಕಪ್ಪು ಹಣ ತಂದು ಜನರಿಗೆ ಹಂಚುವುದಾಗಿ ಹೇಳಿದ್ದ ಬಿಜೆಪಿಯ ಆಡಳಿತದಲ್ಲಿ ಅಗತ್ಯ ವಸ್ತುಗಳ ಬೆಲೆ ಗಗನಕ್ಕೇರಿದೆ ಎಂದು ಆಕ್ರೋಶ ವ್ಯಕ್ತಪಡಿಸಿದರು.

ಜಿಲ್ಲಾ ಕಾರ‌್ಯದರ್ಶಿ ಜಿ.ಸಿ.ಸುರೇಶ್‌ಬಾಬು ಮಾತನಾಡಿದರು. ಟಿ.ಆರ್.ಉಮಾಪತಿ, ಬಿ.ಎಚ್.ಹನುಮಂತಪ್ಪ, ಉಮೇಶ್, ಎಂ.ಬಿ. ಜಯದೇವಮೂರ್ತಿ, ಭಾಗ್ಯಮ್ಮ, ರತ್ನಮ್ಮ, ರಾಧಮ್ಮ, ವಿನೋದಮ್ಮ, ಸಾವಿತ್ರಮ್ಮ, ಸತ್ಯಕೀರ್ತಿ, ಸುವರ್ಣಮ್ಮ, ಪರ್ವಿನ್‌ತಾಜ್, ಗಿರಿಜಮ್ಮ ಮತ್ತಿತರರು ಪ್ರತಿಭಟನೆಯಲ್ಲಿ ಇದ್ದರು.