ಜಿಲ್ಲೆ

ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಪೌರ ಕಾರ್ಮಿಕರ ಪ್ರತಿಭಟನೆ


ಮೈಸೂರು: ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ನಗರ ಪಾಲಿಕೆ ಪೌರ ಕಾರ್ಮಿಕರ ಒಕ್ಕೂಟದಿಂದ ನಗರ ಪಾಲಿಕೆ ಕಚೇರಿ ಎದುರು ಪ್ರತಿಭಟನೆ ನಡೆಯಿತು.

ಪಾಲಿಕೆಯ 158 ಕಾಯಂ ಪೌರ ಕಾರ್ಮಿಕರಿಗೆ ಗೃಹಭಾಗ್ಯ ಯೋಜನೆಯಡಿ ಜಿ ಪ್ಲಸ್ 3 ಮಾದರಿಯ ಮನೆಗಳ ನಿರ್ಮಾಣಕ್ಕೆ ಮುಡಾದಿಂದ ಮಳಲವಾಡಿಯಲ್ಲಿ ಮಂಜೂರಾದ 1.20 ಎಕರೆ ಜಾಗದಲ್ಲಿಯೇ ಮನೆಗಳನ್ನು ನಿರ್ಮಾಣ ಮಾಡಬೇಕು, ನೇರ ಪಾವತಿಯಡಿ ಕೆಲಸ ನಿರ್ವಹಿಸುತ್ತಿದ್ದ ಪೌರ ಕಾರ್ಮಿಕರಲ್ಲಿ ಕೆಲವರು ಮೃತಪಟ್ಟಿದ್ದು, ಕೆಲವರು ನಿವೃತ್ತರಾಗಿದ್ದಾರೆ. ಅಂತಹ ಕುಟುಂಬದ ಸದಸ್ಯರಿಗೆ ಅನುಕಂಪದ ಆಧಾರದ ಮೇಲೆ ಉದ್ಯೋಗ ನೀಡಬೇಕು ಎಂದು ಒತ್ತಾಯಿಸಲಾಯಿತು. ಪ್ರತಿಭಟನೆಯಲ್ಲಿ ಒಕ್ಕೂಟದ ಪದಾಧಿಕಾರಿಗಳಾದ ಎನ್. ರಾಜ, ಸಿ.ಎಂ. ರಾಮಯ್ಯ, ರಾಮು, ಸಣ್ಣ ಬೋರ, ನರಸಿಂಹ, ಎಂ.ವಿ. ವೆಂಕಟೇಶ್, ಮಂಚಯ್ಯ, ರಾಮಾಂಜನೇಯ ಹಾಗೂ ಇತರರು ಪಾಲ್ಗೊಂಡಿದ್ದರು.